ಶಿವಮೊಗ್ಗ:14ರಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ದಲಿತ ಸಮುದಾಯದ ಹಿರಿಯ ನಾಯಕ ಹಾಗೂ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರ ಹೆಸರು ಕೈಬಿಟ್ಟಿರುವುದು, ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಶಿವಮೊಗ್ಗ ಕರ್ನಾಟಕ ಮಾದಿಗ ದಂಡೋರ, ಜಗಜೀವನ್ ರಾಮ್ ಸಮಿತಿ ,ಅಂಬೇಡ್ಕರ್ ಸಮಿತಿ ,ದಲಿತ ಸಂಘಟನೆಗಳು ಬಲವಾಗಿ ಖಂಡಿಸಿದ್ದಾರೆ.
ಡಾ. ಬಿ.ಆರ್.ಅಂಬೇಡ್ಕರ್ ಅವರು ಸಮಾನತೆಯ ಸಂಕೇತ. ಆದರೆ ಅವರ – ಜಯಂತಿಯ ಕಾರ್ಯಕ್ರಮದಲ್ಲೇ ಸಮುದಾಯದ ಸಚಿವರಿಗೆ ಸ್ಥಾನ ನೀಡದೆ ಕಡೆಗಣಿಸಿರುವುದು ವಿಷಾದನೀಯ. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಈ ತಪ್ಪನ್ನು ಸರಿಪಡಿಸಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು,ದಲಿತರಲ್ಲಿನ ಮಾದಿಗ ಸಮುದಾಯವನ್ನು ಪ್ರತಿನಿಸುವ ಹಿರಿಯ ಸಚಿವರಿಗೆ ಆಹ್ವಾನ ಪತ್ರಿಕೆಯಲ್ಲಿ ಸ್ಥಾನ ನೀಡದಿರುವುದು ಇಡೀ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಎಂದು ಮೂರ್ತಿ ಸಿ ಆಕ್ರೋಶ ವ್‌ಯಕ್ತಪಡಿಸಿದ್ದಾರೆ.
ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿಸ್ಥಳೀಯ ಸಚಿವರು ಹಾಗೂ ಸಮುದಾಯದ ಪ್ರಮುಖ ಪ್ರತಿನಿSಗಳ ಹೆಸರಿರುವುದು ಶಿಷ್ಟಾಚಾರ. ಆದರೆ ಇಲ್ಲಿ ಶಿಷ್ಟಾಚಾರವನ್ನು ಗಾಳಿಗೆ ತೂರಲಾಗಿದೆ, ಈ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ಕೂಡಲೇ ಸಚಿವರ ಹೆಸರು ಒಳಗೊಂಡ ಹೊಸ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಬೇಕು ಎಂಬುದು ಸಂಘಟನೆಗಳ ಮುಖಂಡರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









