ಮನೆ ಶಿವಮೊಗ್ಗ ಅಕ್ರಮವಾಗಿ ಕಾಡು ಹಂದಿ ಮಾಂಸ ಮಾರಾಟ /ಅರಣ್ಯಾಧಿಕಾರಿಗಳ ದಾಳಿಗೆ ಸಿಕ್ಕಿಬಿದ್ದ ಆರೋಪಿ..!!

ಅಕ್ರಮವಾಗಿ ಕಾಡು ಹಂದಿ ಮಾಂಸ ಮಾರಾಟ /ಅರಣ್ಯಾಧಿಕಾರಿಗಳ ದಾಳಿಗೆ ಸಿಕ್ಕಿಬಿದ್ದ ಆರೋಪಿ..!!

78
0

ಶಿವಮೊಗ್ಗ ಗ್ರಾಮಾಂತರದ ಕುಂಸಿ ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು 64 ಕೆಜಿ ತೂಕದ ಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಬಾಳೆಕೊಪ್ಪದ ನಿವಾಸಿಗಳಾದ ಕೃಷ್ಣ (35), ಶಿವು (25), ಹುಚ್ಚರಾಯ (35) ಮತ್ತು ಕಪಿಲ್ ಅಲಿಯಾಸ್ ರವಿ (35) ಎಂಬುವವರು ಸೋಮವಾರ ಮಧ್ಯಾಹ್ನ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದರು ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡವು ಕೃಷ್ಣ ಎಂಬಾತನನ್ನು ರೆಡ್‌ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಉಳಿದ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬಂಧಿತ ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 64 ಕೆಜಿ ಮಾಂಸವನ್ನು ಜಪ್ತಿ ಮಾಡಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t