ಮನೆ ಶಿವಮೊಗ್ಗ ಅಕ್ರಮವಾಗಿ ಮನೆ ಪ್ರವೇಶಿಸಿ ದಾಂದಲೆ ಎಬ್ಬಿಸಿದ ಭದ್ರಾವತಿ ವ್ಯಕ್ತಿಗೆ ನ್ಯಾಯಾಲಯ ಕಠಿಣ ಶಿಕ್ಷೆ..!!

ಅಕ್ರಮವಾಗಿ ಮನೆ ಪ್ರವೇಶಿಸಿ ದಾಂದಲೆ ಎಬ್ಬಿಸಿದ ಭದ್ರಾವತಿ ವ್ಯಕ್ತಿಗೆ ನ್ಯಾಯಾಲಯ ಕಠಿಣ ಶಿಕ್ಷೆ..!!

14
0

ಶಿವಮೊಗ್ಗ,: ಮನೆಗೆ ಅಕ್ರಮ ಪ್ರವೇಶ ಮಾಡಿ, ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಗೆ 01 ವರ್ಷದ ಕಾರಾಗೃಹ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.

ದಿನಾಂಕ:03-10-2021 ರಂದು ಅಹ್ಮದ್ ಷರೀಫ್ 34 ವರ್ಷ ನೇತಾಜಿ ರಸ್ತೆ 1 ನೇ ಕ್ರಾಸ್ ಹಳೆನಗರಭದ್ರಾವತಿ ಈತನು ಎದುರು ಮನೆಯ ವಾಸಿ ಮಹಮ್ಮದ್‌ ಸಾಬ್‌ ರವರ ಮನೆಗೆ ಅಕ್ರಮ ಪ್ರವೇಶ ಮಾಡಿ, ಅವರಿಗೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಳೇನಗರ ಠಾಣಾಗುನ್ನೆ ಸಂಖ್ಯೆ: 0117/2021 ಕಲಂ: 506, 504, 323, 307, 448 ಅಡಿಯಲ್ಲಿ ಪ್ರಕರಣವು ದಾಖಲಾಗಿರುತ್ತದೆ.

ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಪಿಎಸ್ಐ ಈರೇಶ್‌ ರವರು ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. ಸರ್ಕಾರಿ ಅಭಿಯೋಜಕರವರು ರತ್ನಮ್ಮ ಪಿ. ವಾದಮಂಡಿಸಿದ್ದು, ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿಯ ಘನ 4ನೇಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ರವರು ಆರೋಪಿಗೆ 01 ವರ್ಷ ಸಾದಾ ಕಾರಾವಾಸ ಶಿಕ್ಷೆ ಮತ್ತು ರೂ. 2,000/- ದಂಡ ವಿಧಿಸಿ ಆದೇಶಿಸಿರುತ್ತಾರೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t