ಮನೆ Blog ಆನಂದಪುರದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ..

ಆನಂದಪುರದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ..

253
0

ಆನಂದಪುರ:

ಆನಂದಪುರದ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕವನ್ನು ಇಂದು ಜಾತ್ರಾ ಸಮಿತಿ ನಿಗದಿಪಡಿಸಿದ್ದಾರೆ.

ಆನಂದಪುರದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಸಮಿತಿಯು ದಿನಾಂಕವನ್ನು ನಿಗದಿಪಡಿಸಿದ್ದಾರೆ.

ಪ್ರತಿ ಮೂರು ವರ್ಷಗಳಿಂದ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರೆಯು ಫೆಬ್ರವರಿ 24 ರಿಂದ ಮಾರ್ಚ್ 2 ರವರೆಗೆ ನಡೆಯಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ಡಿಸೆಂಬರ್ 23ಕ್ಕೆ ಮರ ಕಡಿಯುವ ಶಾಸ್ತ್ರವನ್ನು ನಡೆಸಲಾಗುವುದು. ಫೆಬ್ರವರಿ 17ಕ್ಕೆ ಅಂಕೆ ಹಾಕಲಾಗುವುದು. ಫೆಬ್ರುವರಿ 24 ರ ಮಂಗಳವಾರ ಜಾತ್ರೆ ಆರಂಭವಾಗಲಿದ್ದು, ಮಾರ್ಚ್ 2 ಸೋಮವಾರ ಮಾರಿಕಾಂಬ ದೇವಿಯ ಜಾತ್ರೆ ಮುಗಿಯಲಿದೆ.

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t