✒️..ಅಮಿತ್ ಆರ್ ಆನಂದಪುರ
ಆನಂದಪುರ: ಹೋಬಳಿ ನಾಡ ಕಚೇರಿಯಲ್ಲಿ ಸೋಮವಾರ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಕುರಿತ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು.ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಿ, ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲರ ವೇತನ, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮನಸ್ವಿನಿ ಹಾಗೂ ಮೈತ್ರಿ ಯೋಜನೆಗಳ ಸೌಲಭ್ಯ ಪಡೆಯಲು ಬಂದ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು.ಅರ್ಜಿದಾರರಿಗೆ ಅಗತ್ಯ ದಾಖಲೆಗಳ ಕುರಿತು ಮಾಹಿತಿ ನೀಡಲಾಗಿದ್ದು, ಯೋಜನೆಗಳ ಪ್ರಯೋಜನಗಳನ್ನೂ ವಿವರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡ ಕಚೇರಿ ಉಪತಹಸೀಲ್ದಾರ್ ಶ್ರೀ ಶಾಂತಮೂರ್ತಿ ಬಿ. ವಹಿಸಿದ್ದರು. ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಅರ್ಹರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಕವಿರಾಜ್, ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು, ಕಚೇರಿ ಸಿಬ್ಬಂದಿ ಹಾಗೂ ಹಲವು ಫಲಾನುಭವಿಗಳು ಭಾಗವಹಿಸಿದ್ದರು.
















