ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನ ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 9 ವಿಕೆಟ್ ನಷ್ಟಕ್ಕೆ 264 ರನ್ ಮಾಡಿದೆ.
ಮಾಜಿ ನಾಯಕ ರೋಹಿತ್ ಶರ್ಮಾ ಅವರು ಅತ್ಯಂತ ನಿಧಾನವಾಗಿ ಬ್ಯಾಟ್ ಬೀಸಿದರೂ 73 ರನ್ ಗಳಿಸಿದರು. 97 ಎಸೆತ ಎದುರಿಸಿದ ಅವರು ಈ ವೇಳೆ ಏಳು ಬೌಂಡರಿ ಮತ್ತು ಎರಡು ಸಿಕ್ಸರ್ ಬಾರಿಸಿದರು.

ಇದೇ ವೇಳೆ ಹಿಟ್‌ಮ್ಯಾನ್ ರೋಹಿತ್ ಹೊಸ ದಾಖಲೆಯೊಂದನ್ನು ಬರೆದರು. ಆಸ್ಟ್ರೇಲಿಯಾದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಕ್ರಿಕೆಟ್‌ನಲ್ಲಿ 1,000 ರನ್ ಮೈಲಿಗಲ್ಲು ತಲುಪುವ ಮೂಲಕ ತಮ್ಮ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡರು. ಗುರುವಾರ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಈ ಮೈಲಿಗಲ್ಲು ತಲುಪಿದರು. ಭಾರತದ ಮತ್ತೋರ್ವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಪ್ರಸ್ತುತ ಪಟ್ಟಿಯಲ್ಲಿ 802 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಭಾರತದ ಆರಂಭಿಕ ಆಟಗಾರ ರೋಹಿತ್ 55 ಕ್ಕಿಂತ ಹೆಚ್ಚಿನ ಸರಾಸರಿ ಹೊಂದಿದ್ದಾರೆ. ಅವರ ಅತ್ಯುತ್ತಮ ಸ್ಕೋರ್ 171.

21 ಪಂದ್ಯಗಳಿಂದ ರೋಹಿತ್ ಒಂದು ಸಾವಿರಕ್ಕೂ ಹೆಚ್ಚು ರನ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು 4 ಶತಕಗಳು ಮತ್ತು 2 ಅರ್ಧಶತಕಗಳು ಸೇರಿದಂತೆ 55.77 ರ ಬಲವಾದ ಸರಾಸರಿಯನ್ನು ಹೊಂದಿದ್ದಾರೆ.ಇದೇ ವೇಳೆ SENA (ದ.ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ) ದೇಶಗಲ್ಲಿ 150 ಶತಕ ಬಾರಿಸಿದ ಸಾಧನೆ ಮಾಡಿದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಾಪ್ ಗ್ರೂಪ್ ಅಲ್ಲಿ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









