ಮನೆ ರಾಜ್ಯ ಇಂದು ದ್ವಿತೀಯ ಪಿಯುಸಿ ಫಲಿತಾಂಶ..!!

ಇಂದು ದ್ವಿತೀಯ ಪಿಯುಸಿ ಫಲಿತಾಂಶ..!!

44
0

✒️..ಅಮಿತ್ ಆರ್ ಆನಂದಪುರ

ಬೆಂಗಳೂರು:ಇಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸು ವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಹೇಗೆ ನೋಡುವುದು ರಿಸಲ್ಟ್..?

ಫಲಿತಾಂಶವನ್ನು https://karresults.nic.in ಈ ವೆಬ್ ಸೈಟ್ ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆಪ್ ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್ /ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ಮಂಡಳಿಯಿಂದ ರವಾನೆಯಾಗುತ್ತದೆ.

ಅಂಕಪಟ್ಟಿ ಪಡೆಯೋದು ಹೇಗೆ ?

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. https://www.digilocker.gov.in ಈ ಲಿಂಕ್ ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಮಾಹಿತಿ ನೀಡಿದೆ. ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಯಾವ ರೀತಿ ಡೌನ್‌ಲೋಡ್ ಮಾಡಿಕೊಳ್ಳ ಬೇಕು ಎನ್ನುವ ಮಾಹಿತಿಯನ್ನುhttps://tinyurl.com/mw84wmh9 ಈ ಲಿಂಕ್ ಮೂಲಕ ತಿಳಿದುಕೊಳ್ಳಬಹುದು.

ರಾಜ್ಯದ ಎಲ್ಲಾ ಪಿಯು ಕಾಲೇಜುಗಳಿಗೂ ತಮ್ಮ ವಿದ್ಯಾ ರ್ಥಿಗಳ ಫಲಿತಾಂಶದ ಪಟ್ಟಿಯನ್ನು ಗುರುವಾರ ಮಧ್ಯಾಹ್ನ 3 ಗಂಟೆಗೇ ಲಭ್ಯಗೊಳಿ ಸಲಾಗುವುದು ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.ಸಂಜೆ 6.15ಕ್ಕೆ ಫಲಿತಾಂಶದ ಒಟ್ಟಾರೆ ಮಾಹಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಪ್ರಕಟಿಸಲಿದ್ದಾರೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ