ಮನೆ ರಾಜ್ಯ ಎಸ್ಸೆಸ್ಸೆಲ್ಸಿ ಉತ್ತೀರ್ಣ ಕನಿಷ್ಠ ಅಂಕ 206ಕ್ಕೆ ಇಳಿಸಿ ರಾಜ್ಯ ಸರಕಾರ ಆದೇಶ…!!

ಎಸ್ಸೆಸ್ಸೆಲ್ಸಿ ಉತ್ತೀರ್ಣ ಕನಿಷ್ಠ ಅಂಕ 206ಕ್ಕೆ ಇಳಿಸಿ ರಾಜ್ಯ ಸರಕಾರ ಆದೇಶ…!!

111
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು, ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿ ಮತ್ತು ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಪರೀಕ್ಷೆ ಎರಡೂ ಸೇರಿದಂತೆ ಒಟ್ಟಾರೆ ಶೇ.33 ಅಂದರೆ 625 ಅಂಕಗಳಿಗೆ (239ರ ಬದಲು) ಕನಿಷ್ಠ 206 ಅಂಕಗಳನ್ನು ಗಳಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಇತ್ತೀಚೆಗಷ್ಟೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಉತ್ತೀರ್ಣತೆಯ ಅಂಕಗಳನ್ನು ಶೇ. 35ರಿಂದ ಶೇ. 33ಕ್ಕೆ ಇಳಿಸಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಪರೀಕ್ಷಾ ಮಂಡಳಿ ಸುತ್ತೋಲೆಯನ್ನು ಹೊರಡಿಸಿದೆ.

2025-26ನೇ ಸಾಲಿನಿಂದ ಆಂತರಿಕ ಪರೀಕ್ಷೆಯನ್ನು ಒಟ್ಟು 125 ಅಂಕಗಳಿಗೆ ಅಂದರೆ ಪ್ರಥಮ ಭಾಷೆಗೆ 25 ಅಂಕ ಮತ್ತು ಉಳಿದ 5 ವಿಷಯಗಳಿಗೆ 20 ಅಂಕಗಳಿಗೆ ನಡೆಸಲಾಗುತ್ತದೆ. ಬಾಹ್ಯ ಪರೀಕ್ಷೆಯನ್ನು 500 ಅಂಕಗಳಿಗೆ ಅಂದರೆ ಪ್ರಥಮ ಭಾಷೆಗೆ 100 ಅಂಕ ಮತ್ತು ಉಳಿದ 5 ವಿಷಯಗಳಿಗೆ 80 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :https://chat.whatsapp.com/CnYYumPSez6AMYyw8cHG9A?mode=ac_t