ಆನಂದಪುರ:ಮಕ್ಕಳು ದೇವರು ಇದ್ದಹಾಗೆ ಅವರು ಓದುವ ಶಾಲೆ ದೇವಾಲಯ ಎಂದು ಶಾಸಕರಾದ ಗೋಪಾಲ ಕೃಷ್ಣ ಬೇಳೂರು ತಿಳಿಸಿದರು.
ಇವರು ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರವನ್ನು ಕೊಟ್ಟು ಮೂಲಭೂತ ಸೌಕರ್ಯವನ್ನು ಒದಗಿಸಿಸುವುದರ ಮೂಲಕ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತಿದೆ ಎಂದರು.

ನಾನು ಸಹ ನನ್ನ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದೇನೆ ಯಾವ ವಿದ್ಯಾರ್ಥಿಯು ಸಹ ಶಿಕ್ಷಣದ ವಂಚಿತರಾಗುದಕ್ಕೆ ನಾನು ಬಿಡುತ್ತಿಲ್ಲ ಹಾಗೆ ನಮ್ಮ ಜಿಲ್ಲೆಯಲ್ಲಿ ಶಿಕ್ಷಣದಲ್ಲಿ ನಮ್ಮ ಸಾಗರ ತಾಲೂಕು ಎರಡನೇ ಸ್ಥಾನದಲ್ಲಿದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಒಂದೊಂದು ಪ್ರತಿಭೆ ಇರುತ್ತದೆ ಅದನ್ನು ಹೊರತರಲು ಶಿಕ್ಷಕರು ಹಾಗೂ ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಮಕ್ಕಳ ಶಿಕ್ಷಣಕ್ಕಿಂತ ದೊಡ್ಡದು ಯಾವುದು ಇಲ್ಲ ಒಂದು ಹೊತ್ತು ಊಟ ಬಿಟ್ಟರು ಪರವಾಗಿಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದು ಪೋಷಕರಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮುರಳಿ ವಹಿಸಿದ್ದರು ಹಾಗೂ ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷ ಗುರುರಾಜ್, ಉಪಾಧ್ಯಕ್ಷೇ ಮೂಕಾಂಬು, ಸದಸ್ಯರಾದ ಶಂಕರ್, ಮೋಹನ್ ಕುಮಾರ್, ನೇತ್ರಾವತಿ ಮಂಜುನಾಥ್, ಗಜೇಂದ್ರ ಯಾದವ್, ಸಿಆರ್ ಪಿ ಚಂದ್ರನಾಯಕ್ ಪ್ರಮುಖರಾದ ಉಮೇಶ್ ,ನಾಗರಾಜ್, ಸುಬ್ರಹ್ಮಣ್ಯ, ಉಳವಿ ಮಂಜಪ್ಪ ಇನ್ನಿತರರು ಉಪಸ್ಥಿತರಿದ್ದರು.
ವಿಶೇಷವಾಗಿ ವೇದಿಕೆಯಲ್ಲಿ ಶಿಕ್ಷಣ ಆನಂದಪುರ ಸಂಯೋಜಕರಾದ ಕುಮಾರಸ್ವಾಮಿ ಇವರಿಗೆ ಸನ್ಮಾನಿಸಲಾಯಿತು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









