ಮನೆ Blog ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆ ಪೂರ್ವ ಸಿದ್ಧತಾ ಸಭೆ : ಶಾಸಕ ಬೇಳೂರು ಗೋಪಾಲಕೃಷ್ಣ..!!

ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆ ಪೂರ್ವ ಸಿದ್ಧತಾ ಸಭೆ : ಶಾಸಕ ಬೇಳೂರು ಗೋಪಾಲಕೃಷ್ಣ..!!

19
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.39138907, 0.44266683);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 47;

✒️…ಅಮಿತ್ ಆರ್ ಆನಂದಪುರ

ಆನಂದಪುರ: ಆನಂದಪುರ ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.

ಆನಂದಪುರ ಗ್ರಾಮ ಪಂಚಾಯಿತಿಯಲ್ಲಿ ಜಾತ್ರೆಯ ಪ್ರಯುಕ್ತ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಏಳು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಭಕ್ತರು ಹಾಗೂ ಗ್ರಾಮಸ್ಥರಿಗೆ ಸಮರ್ಪಕವಾಗಿ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲಾ ವಾರ್ಡ್‌ಗಳ ಚರಂಡಿಗಳನ್ನು ತಕ್ಷಣ ಸ್ವಚ್ಛಗೊಳಿಸಿ, ಕೆಲ ಅಧಿಕಾರಿಗಳು ಸ್ಥಳದಲ್ಲೇ ನಿಂತು ಕಾರ್ಯವನ್ನು ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಿದರು.

ಪ್ರತಿದಿನ 25 ರಿಂದ 30 ಸಾವಿರ ಜನರು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಪೊಲೀಸ್ ಇಲಾಖೆ ವಿಶೇಷ ನಿಗಾವಹಿಸಿ ಸಮರ್ಪಕ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಪಿಎಸ್ಐ ಪ್ರವೀಣ್ ಅವರಿಗೆ ಮಾರ್ಗದರ್ಶನ ನೀಡಿದರು.

ಜಾತ್ರೆಯ ಸುತ್ತಮುತ್ತಲಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಳ್ಳತನ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕೆಲಸ ಮಾಡಬೇಕು ಎಂದರು.

ಜಾತ್ರೆ ಅವಧಿಯಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಿ, ಎರಡು ಆಂಬುಲೆನ್ಸ್‌ಗಳನ್ನು ಜಾತ್ರೆಗೆ ಮೀಸಲಿಡಬೇಕು ಎಂದು ತಿಳಿಸಿದರು.

ಮಾರಿಕಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ ಕುಂದುಕೊರತೆಗಳು ಉಂಟಾಗದಂತೆ ಎಲ್ಲಾ ಅಧಿಕಾರಿಗಳು ಏಳು ದಿನಗಳ ಕಾಲ ಕಡ್ಡಾಯವಾಗಿ ಜಾತ್ರಾ ಸ್ಥಳದಲ್ಲೇ ಹಾಜರಿದ್ದು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಇ.ಓ ಶಿವಪ್ರಕಾಶ್, ಉಪ ತಹಶೀಲ್ದಾರ್ ಶಾಂತಮೂರ್ತಿ, ಪಿಡಿಒ ವಾಣಿ, ಜಾತ್ರಾ ಸಮಿತಿ ಅಧ್ಯಕ್ಷ ವೆಂಕಟೇಶ್, ಪಕ್ಷದ ಮುಖಂಡರು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

✒️…ಅಮಿತ್. ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t