Home Shivamogga ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: 26 ವರ್ಷದ ಪೊಲೀಸ್ ಕಾನ್‌ಸ್ಟೇಬಲ್ ಸಾವು..!!

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: 26 ವರ್ಷದ ಪೊಲೀಸ್ ಕಾನ್‌ಸ್ಟೇಬಲ್ ಸಾವು..!!

32
0

✒️…ಅಮಿತ್ ಆರ್ ಆನಂದಪುರ


ಶಿವಮೊಗ್ಗ: ಕರ್ತವ್ಯದ ಮೇಲಿದ್ದಾಗಲೇ ತೀವ್ರ ಹೃದಯಾಘಾತಕ್ಕೊಳಗಾದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಪಡೆಯ ಯುವ ಕಾನ್‌ಸ್ಟೇಬಲ್ ಒಬ್ಬರು ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.

​ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮೂಲದ ಈರಣ್ಣ ಗುಡಾದಾರ್ (26) ಮೃತಪಟ್ಟ ದುರ್ದೈವಿ. ಇವರು ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.

​ಮೇ 26ರಂದು (ನಿನ್ನೆ) ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

​18 ದಿನಗಳ ಹಿಂದೆಯಷ್ಟೇ ಮದುವೆ:
ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎನ್ನಲಾಗಿದ್ದು, ನವವಿವಾಹಿತನ ಅಕಾಲಿಕ ಮರಣ ಕುಟುಂಬದವರನ್ನು ಕಣ್ಣೀರಲ್ಲಿ ಮುಳುಗಿಸಿದೆ. ಮೃತರು ಪತ್ನಿ, ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಕಮಾಂಡೆಂಟ್ ಸಂತಾಪ: ಯುವ ಸಿಬ್ಬಂದಿಯ ಹಠಾತ್ ನಿಧನಕ್ಕೆ ಕೆಎಸ್‌ಆರ್‌ಪಿ 8ನೇ ಪಡೆಯ ಕಮಾಂಡೆಂಟ್ ಎಸ್. ಯುವಕುಮಾರ್ ತೀವ್ರ ಕಂಬನಿ ಮಿಡಿದಿದ್ದಾರೆ. ‘ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಯುವ ಅಧಿಕಾರಿಯನ್ನು ಕಳೆದುಕೊಂಡಿರುವುದು ಇಲಾಖೆಗೆ ದೊಡ್ಡ ನಷ್ಟ. ಮೃತರ ಕುಟುಂಬಕ್ಕೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ’ ಎಂದು ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.