ಆನಂದಪುರ: 2024ರಲ್ಲಿ ಆನಂದಪುರ ಸಮೀಪದ ಇಸ್ಲಾಂಪುರ ನಿವಾಸಿ ಆಸೀಮ್ ಅವರ ಮೊಬೈಲ್ ಫೋನ್ ಕಳೆದುಹೋಗಿದ್ದು, ಈ ಕುರಿತು ಅವರು ರಿಪ್ಪನ್ ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದಲ್ಲಿ ಪೊಲೀಸರು CEIR (Central Equipment Identity Register) ವ್ಯವಸ್ಥೆಯಲ್ಲಿ ಮೊಬೈಲ್ ಅನ್ನು ಬ್ಲಾಕ್ ಮಾಡಿ ಶೋಧ ಕಾರ್ಯವನ್ನು ಆರಂಭಿಸಿದ್ದರು. ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಇದೀಗ ಕಳೆದುಹೋದ ಮೊಬೈಲ್ ಪತ್ತೆಯಾಗಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ASI ಹಾಲಪ್ಪ ಅವರು ಪತ್ತೆಯಾದ ಮೊಬೈಲ್ ಫೋನ್ ಅನ್ನು ಮಾಲಿಕ ಆಸೀಮ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪ್ರವೀಣ್ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದುಹೋದ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ CEIR ವ್ಯವಸ್ಥೆಯಲ್ಲಿ ಮೊಬೈಲ್ ಅನ್ನು ಬ್ಲಾಕ್ ಮಾಡಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ. ಇದರಿಂದ ಕಳ್ಳತನ ಹಾಗೂ ದುರುಪಯೋಗವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಲಾಗಿದೆ.
✒️… ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









