ಆನಂದಪುರ:“ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವೇ ನಮ್ಮ ಕರ್ತವ್ಯಗಳಿಗೆ ಮಾರ್ಗದರ್ಶಕ ಎಂದು ಆನಂದಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ತಿಳಿಸಿದರು.
ಇವರು ಇಂದು ಪೊಲೀಸ್ ಠಾಣೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
“ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ದೇಶದ ಕಾನೂನು ವ್ಯವಸ್ಥೆಗೆ ಬೆನ್ನೆಲುಬಾಗಿದ್ದು, ಅದನ್ನು ಕಾಪಾಡುವುದು ಪೊಲೀಸರ ಪ್ರಮುಖ ಕರ್ತವ್ಯ. ಅದರಲ್ಲಿರುವ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ.”

“ಸಮಾನತೆ ಮತ್ತು ನ್ಯಾಯ ಎಂಬ ಮೌಲ್ಯಗಳನ್ನು ಅಂಬೇಡ್ಕರ್ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ನಾವು ಎಲ್ಲರನ್ನೂ ಸಮಾನವಾಗಿ ನೋಡಬೇಕು ಹಾಗೂ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವನ್ನು ಅನುಸರಿಸಬೇಕು,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಎ ಎಸ್ ಐ ವೆಂಕಟೇಶ್ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









