✒️..ಅಮಿತ್ ಆರ್ ಆನಂದಪುರ
ಆನಂದಪುರ: ವ್ಯಾಗನರ್ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ರಿಪ್ಪನ್ ಪೇಟೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕು ಹಾಗೂ ಆನಂದಪುರದಿಂದ ರಿಪ್ಪನ್ ಪೇಟೆಗೆ ಹೋಗುತ್ತಿದ್ದ ಕಾರಿನ ನಡುವೆ ಕೊರಲಿ ಕೊಪ್ಪ ಗ್ರಾಮದ ಬಳಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಬೈಕ್ ಸವಾರರಾದ ಆನಂದಪುರ ಸಮೀಪದ ಬೀಸನ ಗದ್ದೆಯ ಮಹೇಶ್ (26) ತಂದೆ ಓಂಕೇಶ್ ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t










