ಆನಂದಪುರ:
ಕಾವ್ಯಗಳಿಂದ ಮಾತ್ರ ಮನಷ್ಯ ಸಂಬಂಧವನ್ನು ಹೆಚ್ಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್ ಹೇಳಿದರು.
ಅವರು ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ, ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ದಸರಾ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮಾತುಗಳಲ್ಲಿ ಹೇಳಲಾರದ ವಿಚಾರಗಳನ್ನು ಹೇಳಿಕೊಳ್ಳಲು ಕಾವ್ಯದ ಮೂಲಕ ಸಾಧ್ಯವಾಗುತ್ತದೆ ಗ್ರಾಮೀಣ ಭಾಗದಲ್ಲಿ ಸಾಕಷ್ಟು, ಕಲಾವಿದರು ಬರಹಗಾರರು ಇದ್ದಾರೆ ಅವರಿಗೆ ಇಂತಹ ವೇದಿಕೆಗಳಿಂದ ಮಾತ್ರ ಗುರುತಿಸಲು ಸಾಧ್ಯವಾಗುತ್ತದೆ ಎಂದರು.

ಕಸಾಪ ತಾಲ್ಲೂಕು ಅಧ್ಯಕ್ಷ ವಿ.ಟಿ.ಸ್ವಾಮಿ ಮಾತನಾಡಿ ಕನ್ನಡ ಕಾವ್ಯ ಪರಂಪರೆಗೆ ಪ್ರಾಚೀನ ಇತಿಹಾಸವಿದೆ. ಕಾವ್ಯ ಕಟ್ಟುವಲ್ಲಿ ಪ್ರತಿಯೊಬ್ಬರು ಮುಂದಾಗಬೇಕು ಆ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಅಧ್ಯಯನ ಅತಿ ಅವಶ್ಯಕವಾಗಿದೆ. ಮನೆ ಮನಗಳಲ್ಲಿ ಕಾವ್ಯದ ಚಿಂತನೆಯಿದ್ದಲ್ಲಿ ಮಾತ್ರ ಮಾನವಿಯ ಸಂಬಂಧಗಳನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಪ್ರತಿ ಮನೆಗೊಂದು ಗ್ರಂಥಾಲಯವನ್ನು ಹೊಂದಿದಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ.
ಮಕ್ಕಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಮನಸ್ಸುಗಳನ್ನುಂಟು ಮಾಡುವ ಕೆಲಸ ಆಗಬೇಕಾಗಿದೆ. ಅಲ್ಲದೆ ಮೌಲ್ಯಗಳನ್ನು ಬಿತ್ತುವ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಪರಿಷತ್ತು ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಹಿತ್ಯ ಪರಿಸರವನ್ನು ಉಂಟುಮಾಡುತ್ತಿದೆ ಎಂದರು.

ಚಂಪಕ ಸರಸು-ಮಹಂತಿನ ಮಠಕ್ಕೆ 400 ವರ್ಷ ತುಂಬಿದ ಹಿನ್ನೆಯಲ್ಲಿ ಈ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸಲು ಆಚಾಪುರ ಗ್ರಾಪಂ ಅಧ್ಯಕ್ಷ ಕಲೀಮುಲ್ಲ ಅವರು ಚಾಲನೆ ನೀಡುವ ಕಾರ್ಯವನ್ನು ಕಸಾಪ ಆನಂದಪುರ ಹೋಬಳಿ ಘಟಕದ ಅಧ್ಯಕ್ಷ ಬಿ.ಡಿ.ರವಿಕುಮಾರ್ ಅವರಿಗೆ ಮಾಹಿತಿಯನ್ನು ಹಸ್ತಾಂತರಿಸಿ ಮಾತನಾಡಿ ಇತಿಹಾಸವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುವ ಮೂಲಕ ನಾಡಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಆಗಬೇಕಾಗಿದೆ. ನಿರಂತರವಾದ ಅಧ್ಯಯನವನ್ನು ಮಾಡುವಂತಾಗಬೇಕು. ಆನಂದಪುರ ಪ್ರದೇಶಕ್ಕೆ ವಿಶೇಷವಾದ ಇತಿಹಾಸವಿದೆ ಅದರಲ್ಲು ಚಂಪಕ ಸರಸು ಇಂದು ಜನಾಕರ್ಷಣೆಯ ಕೇಂದ್ರವಾಗುತ್ತಿದೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಸಂದರ್ಶನ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಆನಂದಪುರ ಹೋಬಳಿ ಘಟಕದ ಅಧ್ಯಕ್ಷ ಬಿ.ಡಿ.ರವಿಕುಮಾರ್ ಮಾತನಾಡಿ ನಮ್ಮ ಸುತ್ತ ಮುತ್ತ ಅನೇಕ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಭೆಗಳು ಇದ್ದಾರೆ ಅಂತಹವರನ್ನು ಗುರುತಿಸಿ ಅವರಿಗೆ ವೇದಿಕೆಯನ್ನು ನೀಡುವ ಕೆಲಸ ಮಾಡಲಾಗುತ್ತಿಗೆ. ಅಷ್ಟೆ ಅಲ್ಲದೆ ಇತಿಹಾಸದ ಬಗ್ಗೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಚಂಪಕ ಸರಸು-400 ವರ್ಷೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ವೇದಿಕೆಯಲ್ಲಿ ಆನಂದಪುರ ಪೊಲೀಸ್ ಇನ್ಸೆ÷್ಪಕ್ಟರ್ ಪ್ರವೀಣ್ ಆನಂದಪುರ ಗ್ರಾಪಂ ಸದಸ್ಯ ಗಜೇಂದ್ರ, ಸಾಮಾಜಿಕ ಕಾರ್ಯಕರ್ತ ರಮಾನಂದ ಸಾಗರ್, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಗಣಪತಿ ಯಡೇಹಳ್ಳಿ, ಮಕ್ಕಳ ಕವಿಗೋಷ್ಠಿ ಅಧ್ಯಕ್ಷೆ, ರಚನಾ, , ಪತ್ರಕರ್ತ ಅಮಿತ್ ಆರ್.ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸಾಧಕ ನಾಗರಾಜ್ ಎಂ ಇವರನ್ನು ಸನ್ಮಾನಿಸಲಾಯಿತು. ಕವಿಗೋಷ್ಠಿಯಲ್ಲಿ, ಧರ್ಮರಾಜ್ ಸಾಗರ್, ಹನೀಫ್, ಮಾನಸ, ಅನು, ಇಂಪನ, ಮಂಜುನಾಥ, ಇಂಚರ, ಮಾನ್ವಿ, ಸೌಜನ್ಯ ಎಸ್ ಮೊದಲಾದವರು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರುಇದೆ ಸಂದರ್ಭದಲ್ಲಿ ಅಗಲಿದ ಹಿರಿಯ ಸಾಹಿತಿ ಡಾ.ಎಸ್.ಎಲ್.ಬೈರಪ್ಪ ಅವರಿಗೆ ನುಡಿನಮನವನ್ನು ಸಲ್ಲಿಸಲಾಯಿತು









