ಆನಂದಪುರ :- ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಹಿರಿಯ ವಿದ್ಯಾರ್ಥಿ ಪ್ರಕಾಶ್ ರುಕ್ಮಯ್ಯ ಹಾಗು ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳ ಸಹಕಾರ ದೊಂದಿಗೆ ನೂತನ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಯಿತು.
ವಿಷಯವಾಗಿ ವಿದ್ಯಾರ್ಥಿಗಳಿಂದಲೆ ನೂತನವಾದ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ರವಿಶಂಕರ್, ಉಪ ಪ್ರಾಂಶುಪಾಲ ಈಶ್ವರಪ್ಪ , ಪ್ರಭಾರಿ ಮುಖ್ಯ ಶಿಕ್ಷಕಿ ಗೌರಿ ಪ್ರಭು, ಸಹ ಶಿಕ್ಷಕಿರಾದ ಇಂದಿರಾ, ಅಮೃತ, ಆಶಾಲತಾ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಗನ್ನಾಥ್, ಬಿ.ಡಿ ರವಿಕುಮಾರ್, ಮಧು ಚಂದ್ರ, ಅಭಿ, ಆಶಾ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









