Home Blog ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯಕ್ಕೆ ಹೊಸ ಕುಲಪತಿ ನೇಮಕ..!!

ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯಕ್ಕೆ ಹೊಸ ಕುಲಪತಿ ನೇಮಕ..!!

32
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ. ಎಂ.ವಿ. ಧನಂಜಯ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.

ಪ್ರಸ್ತುತ ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಸಿಎಆರ್–ಐಐಎಚ್‌ಆರ್)ಯಲ್ಲಿ ಹಿರಿಯ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಧನಂಜಯ ಅವರು ತೋಟಗಾರಿಕಾ ಸಂಶೋಧನೆ, ಸಸ್ಯ ತಳಿ ಅಭಿವೃದ್ಧಿ, ಬೀಜ ತಂತ್ರಜ್ಞಾನ, ಕೃಷಿ ನವೋದ್ಯಮ ಹಾಗೂ ತಂತ್ರಜ್ಞಾನ ವರ್ಗಾವಣೆಯಲ್ಲಿ ಸುಮಾರು ಮೂರು ದಶಕಗಳ ಅನುಭವ ಹೊಂದಿದ್ದಾರೆ.

ಸಂಶೋಧನಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಅವರು 18ಕ್ಕೂ ಹೆಚ್ಚು ತೋಟಗಾರಿಕಾ ತಳಿಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದು, 100ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು, ಏಳು ಪುಸ್ತಕಗಳು ಹಾಗೂ ಹಲವು ಪುಸ್ತಕ ಅಧ್ಯಾಯಗಳನ್ನು ಪ್ರಕಟಿಸಿದ್ದಾರೆ. ಅನೇಕ ಎಂ.ಎಸ್‌ಸಿ. ಮತ್ತು ಪಿಎಚ್‌.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಅವರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳಿಗೆ ಭಾಜನರಾಗಿದ್ದಾರೆ.

ಬಿಇಎಸ್‌ಎಸ್‌ಟಿ–ಹಾರ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಕಾರ್ಯನಿರ್ವಹಿಸಿರುವ ಡಾ. ಧನಂಜಯ ಅವರು ಕೃಷಿ ನವೋದ್ಯಮ, ತಂತ್ರಜ್ಞಾನ ವಾಣಿಜ್ಯೀಕರಣ ಹಾಗೂ ರೈತರಿಗೆ ತಂತ್ರಜ್ಞಾನ ತಲುಪಿಸುವ ಕಾರ್ಯಕ್ರಮಗಳಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ.

ಅವರ ನೇಮಕದಿಂದ ವಿಶ್ವವಿದ್ಯಾಲಯದ ಶೈಕ್ಷಣಿಕ, ಸಂಶೋಧನಾ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ನಿರೀಕ್ಷೆ ಇದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಜಾಹೀರಾತು: