Home Shivamogga Sagara ಗಾಳಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ನೆರವು : ಸೋಮಶೇಖರ್ ಲಾವಿಗೆರೆ

ಗಾಳಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ನೆರವು : ಸೋಮಶೇಖರ್ ಲಾವಿಗೆರೆ

36
0

✒️..ಅಮಿತ್ ಆರ್ ಆನಂದಪುರ

ಸಾಗರ(ಆನಂದಪುರ): ಸೋಮವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ವೈಯಕ್ತಿಕ ಧನಸಹಾಯ ನೀಡಲಾಗುತ್ತಿದೆ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೋಮಶೇಖರ್ ಲಾವಿಗೆರೆ ತಿಳಿಸಿದರು.

ಆನಂದಪುರ ಸುತ್ತಮುತ್ತಲಿನಲ್ಲಿ ಗಾಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

ಗಾಳಿ ಮಳೆಯಿಂದ ಹಲವು ಮನೆಗಳು ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಾಸಕರು ಊರಿನಲ್ಲಿ ಇಲ್ಲದಿದ್ದರು ಜನರ ಸಮಸ್ಯೆಗಳನ್ನು ಆಲಿಸಿ ಹಾನಿಗೊಳಗಾದ ಸಂತ್ರಸ್ತರಿಗೆ ಶಾಸಕರ ಕಡೆಯಿಂದ ವೈಯಕ್ತಿಕ ಧನ ಸಹಾಯ ಮಾಡಲು ತಿಳಿಸಿದ್ದಾರೆ ಎಂದರು.

ಸರ್ಕಾರದಿಂದ ದೊರೆಯುವ ಪರಿಹಾರವನ್ನು ಸಂತ್ರಸ್ತರಿಗೆ ಆದಷ್ಟು ಬೇಗ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿ ಬಹಳಷ್ಟು ಹಾನಿ ಗೊಳಗಾದವರಿಗೆ ಸದ್ಯದ ನೆರವಿಗೆ ಟಾರ್ಪಲ್ ಅನ್ನು ನೀಡಿದರು.

ಇದೇ ವೇಳೆ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಕಾಂಪೌಂಡ್ ಗೋಡೆಯೂ ಕುಸಿದು ಬಿದ್ದಿರುವುದನ್ನು ಪರಿಶೀಲಿಸಲಾಯಿತು. ಈ ಕುರಿತು ಮಾತನಾಡಿದ ಶಾಸಕರ ಆಪ್ತ ಸಹಾಯಕ ಶ್ರೀನಿವಾಸ್ ಮೂರ್ತಿ, ಹಾನಿಗೊಳಗಾದ ಕಾಂಪೌಂಡ್ ದುರಸ್ತಿ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪಕ್ಷದ ಮುಖಂಡರಾದ ಚೇತನ್ ರಾಜ್ ಕಣ್ಣೂರು, ಅನಿತಾ ಕುಮಾರಿ, ಸಿರಿಜಾನ್, ಗಜೇಂದ್ರ ಯಾದವ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು,ಗ್ರಾಮ ಆಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.