ಮನೆ ಶಿವಮೊಗ್ಗ ಚಂದ್ರಗುತ್ತಿಯಲ್ಲಿ ಬೆತ್ತಲ ಸೇವೆ ನಿಷೇಧ: ಜಿಲ್ಲಾಧಿಕಾರಿಗಳ ಆದೇಶ..!!

ಚಂದ್ರಗುತ್ತಿಯಲ್ಲಿ ಬೆತ್ತಲ ಸೇವೆ ನಿಷೇಧ: ಜಿಲ್ಲಾಧಿಕಾರಿಗಳ ಆದೇಶ..!!

36
0

ಶಿವಮೊಗ್ಗ: ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ. 24,25ರಂದು ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ‘ಬೆತ್ತಲೆ ಸೇವೆ’ಯನ್ನು ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆಯು ರೇಣುಕಮ್ಮ ದೇವಿ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ