ಸಾಗರ-ಆ:5/ ಜಗತ್ತಿನಲ್ಲಿ ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ ಎಂದು ಬಿಇಓ ಸದಾನಂದ ಸ್ವಾಮಿ ಸಿ. ಹೇಳಿದರು.
ಅವರು ಇಲ್ಲಿಗೆ ಸಮೀಪದ ಸಿರಿವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಸಭಾಂಗಣದಲ್ಲಿ ತಾಳಗುಪ್ಪ ಕಸಾಪ ಹೋಬಳಿ ಘಟಕ ವತಿಯಿಂದ ಆಯೋಜಿಸಿದ್ದ ಸಾಹಿತ್ಯ ಹಾಗೂ ಯಕ್ಷಗಾನ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ.
ಕನ್ನಡ ಸಾಹಿತ್ಯಕ್ಕೆ ಪ್ರಾಚೀನ ಪರಂಪರೆಯನ್ನು ಹೊಂದಿದೆ, ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಕೀರ್ತಿ ಕನ್ನಡ ಸಾಹಿತಿಗಳಿಗೆ ಇದೆ. ಎಲ್ಲಾ ಪ್ರತಿಭಾವಂತರು ವಿದ್ಯಾರ್ಥಿಗಳಾಗಿದ್ದರು ಎನ್ನುವುದನ್ನು ಮರೆಯಬಾರದು, ಅಧ್ಯಯನ ಹಾಗೂ ಅನುಭವದಿಂದ ಸಾಹಿತ್ಯ ರೂಪಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಹಿತ್ಯ ಸಾಂಸ್ಕೃತಿಕ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಸಾಹಿತ್ಯದಿಂದ ಸಂಸ್ಕೃತಿ ಬೆಳೆಯಲು ಸಾಧ್ಯ ಹಾಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಯನ್ನು ಬೆಳೆಯುತ್ತಿರುವುದು ಶ್ಲಾಘನೀಯ ಎಂದರು.

ತಾಳಗುಪ್ಪ ಹೋಬಳಿ ಘಟಕಜ ಅಧ್ಯಕ್ಷರಾದ ಚಂದ್ರಶೇಖರ ಸಿರಿವಂತೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳು ತಮ್ಮ ಸುತ್ತಮುತ್ತಲಿನ ಘಟನೆಗಳನ್ನು ದಾಖಲಿಸುವ ಕೆಲಸ ಆಗಬೇಕಾಗಿದೆ, ಮಕ್ಕಳು ಬಾಡಿಗೆ ಬುದ್ದಿಯಿಂದ ಹೊರಬರಬೇಕಿದೆ, ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿ ಸಾಹಿತ್ಯ ಹೆಚ್ಚು ಪ್ರಯೋಜನ ಆಗಲಿದೆ, ಪ್ರಬಂಧ, ಕತೆ, ಕವನ ರಚನೆಯಿಂದ ಬರವಣಿಗೆ ಹಾಗೂ ಕಲಿಕೆಯಲ್ಲಿ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ ಇಂತಹ ಉತ್ತಮ ಕಲಿಕೆಯನ್ನು ರೂಪಿಸುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.
ಯಕ್ಷಗಾನ ಕಲಾವಿದ ರಾಜು ಭಾಗವತ್ ಯಕ್ಷಗಾನಕ್ಕೆ ತನ್ನದೆಯಾದ ವೈಶಿಷ್ಟ್ಯವನ್ನು ಹೊಂದಿದೆ, ಗಟ್ಟಿಯಾದ ಸಾಹಿತ್ಯ ಇದೆ, ಇದೊಂದು ಗಂಡು ಮೆಟ್ಟಿನ ಕಲೆಯಾಗಿದೆ, ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು ಎಂದರು.
ಕಸಾಪ ತಾಲೂಕು ಅಧ್ಯಕ್ಷ ವಿ.ಟಿ.ಸ್ವಾಮಿ ಮಾತನಾಡಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ ಕೆಲಸ ಆಗಬೇಕಾಗಿದೆ ಅಂತಹ ಪರಿಸರವನ್ನು ಶಾಲೆ ಹಾಗೂ ಮನೆಗಳಲ್ಲಿ ನಿರ್ಮಾಣವಾಗಬೇಕು ಎಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಿರೀಶ್ ಜಿ.ಟಿ.ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಈ ಸಂದರ್ಭದಲ್ಲಿ ಕಜಾಪ ಅಧ್ಯಕ್ಷರಾದ ಸತ್ಯನಾರಾಯಣ ಸಿರಿವಂತೆ,ಮಕ್ಕಳ ಸಾಹಿತಿ ಆಶಯ ಅಶೋಕ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು
ಪ್ರಸ್ತುತಿ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಹೇಮಲತ ಉಪ ಪ್ರಾಚಾರ್ಯರು ಸ್ವಾಗತಿಸಿ ಮಂಜಪ್ಪ ಜೆ.ಸಿ ವಂದಿಸಿ ಸಂತೋಷ ನಿರೂಪಿಸಿದರು.ಇದೆ ಸಂದರ್ಭದಲ್ಲಿ ಪ್ರಬಂಧ ಹಾಗೂ ಕವನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಜಾಹೀರಾತು












