ಆನಂದಪುರ ಸಮೀಪದ ಎಡೇಹಳ್ಳಿಯ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇವಾಲಯದ 20ನೇ ವರ್ಷದ ವಾರ್ಷಿಕೋತ್ಸವ, ಬ್ರಹ್ಮರಥೋತ್ಸವ ಮತ್ತು ಜಾತ್ರಾ ಮಹೋತ್ಸವವನ್ನು ಜನವರಿ 21ರ ಬುಧವಾರದಿಂದ 23ರ ಶುಕ್ರವಾರದವರೆಗೆ ಅದ್ದೂರಿಯಾಗಿ ನಡೆಯಲಿದೆ.
ಜ.21ರ ಬುಧವಾರದಿಂದ ಜಾತ್ರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು.ಜ.22 ರ ಗುರುವಾರ ಸಾಮೂಹಿಕ ಗಣ ಹೋಮ , ಶ್ರೀ ದೇವರ ಬ್ರಹ್ಮರಥೋತ್ಸವ , ಮಧ್ಯಾಹ್ನ ಭಕ್ತಾದಿಗಳಿಗೆ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ ಶ್ರೀ ದೇವರಿಗೆ ರಂಗ ಪೂಜೆಯನ್ನು ಹಮ್ಮಿಕೊಂಡಿದ್ದು ಹಾಗೂ ಜ.23ರ ಶುಕ್ರವಾರ ಶ್ರೀ ದೇವರ ಅವಬೃತ ಸ್ನಾನ, ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ನೆರವೇರಲಿದೆ.

ವಿಶೇಷವಾಗಿ ಪ್ರತಿದಿನ ಸಂಜೆ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಎಲ್ಲಾ ಕಾರ್ಯಕ್ರಮಗಳಿಗೂ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಯಶಸ್ವಿಗೊಳಿಸಿ ಕೊಡಬೇಕೆಂದು ವರಸಿದ್ಧಿ ವಿನಾಯಕ ಸ್ವಾಮಿಯ ದೇವಾಲಯದ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
✒️…ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









