ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಸಂಘದ ಶಾಖೆ ವತಿಯಿಂದ ಜ.17 ಮತ್ತು18 ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2026 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜ.17 ರಂದು ಬೆಳಿಗ್ಗೆ 10 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎಸ್.ಮಧು ಬಂಗಾರಪ್ಪ ಉದ್ಘಾಟನೆಯನ್ನು ನೆರವೇರಿಸಲಿದ್ದು, ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಭದ್ರಾವತಿ ಶಾಸಕ ಮತ್ತು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ/ಲ್ಯಾಂಡ್ಆರ್ಮಿ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮನಿಯಮಿತ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಕಾರ್ಯಕ್ರಮದ ಧ್ವಜಾರೋಹಣವನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿದುವರು ಎಂದು ತಿಳಿಸಿದರು.
ಕ್ರೀಡಾಕೂಡ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಜಿಲ್ಲೆಯಿಂದ 3000 ಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗವಹಿಸಲಿದ್ದು, ನೆಹರು ಕ್ರೀಡಾಂಗಣದಲ್ಲಿ ಅಥ್ಲೇಟಿಕ್ಸ್, ಥ್ರೋಬಾಲ್, ನವುಲೆ ಕ್ರೀಡಾಂಗಣದಲ್ಲಿ ಕ್ರಿಕೆಟ್, ಗೋಪಾಳದಲ್ಲಿ ಕ್ಲಬ್‌ನಲ್ಲಿ ಟೆಬಲ್ ಟೆನಿಸ್, ಈಜು ಸ್ಪರ್ಧೆ, ಕುವೆಂಪು ರಂಗಮಂದಿರದಲ್ಲಿ ಭಾವಗೀತೆ, ಜನಪದ ಗೀತೆ, ಸುಗಮ ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ನೌಕರರು ಜ.17 ರ ಬೆಳಿಗ್ಗೆ 8 ರಿಂದ 10 ಗಂಟೆಯೊಳಗೆ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಡ ಮತ್ತು ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ 2 ದಿನ ಸಾಂದರ್ಭಿಕವಾಗಿ ರಜೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಆರ್.ಪಾಪಣ್ಣ, ಸರ್ಕಾರಿ ನೌಕರರ ಸಂಘದ ದಿನೇಶ್, ನರಸಿಂಹ, ಕೃಷ್ಣಮೂರ್ತಿ, ಮಾರುತಿ, ಅಶೋಕ್, ಚೇತನ್ ಹಾಜರಿದ್ದರು.
✒️..ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









