Home Shivamogga ಜಿಲ್ಲೆಯ ಉಳವಿಯಲ್ಲಿ ಮೆಸ್ಕಾಂ ಸಹಾಯಕ ಇಂಜಿನಿಯರ್ ಅಮಾನತ್ತು ಕಾರಣವೇನು..?

ಜಿಲ್ಲೆಯ ಉಳವಿಯಲ್ಲಿ ಮೆಸ್ಕಾಂ ಸಹಾಯಕ ಇಂಜಿನಿಯರ್ ಅಮಾನತ್ತು ಕಾರಣವೇನು..?

33
0

✒️.. ಅಮಿತ್ ಆರ್ ಆನಂದಪುರ

ಶಿವಮೊಗ್ಗ :ಕರ್ತವ್ಯ ಲೋಪದ ಹಿನ್ನೆಲೆ ಸೊರಬ ಉಪವಿಭಾಗದ ಉಳವಿ ಶಾಖೆಯ ಮೆಸ್ಕಾಂ ಸಹಾಯಕ ಇಂಜಿನಿಯರ್‌ ಇಬ್ರಾಹಿಂ ಎನ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಎಂಜಿನಿಯರ್‌ ಆದೇಶಿಸಿದ್ದಾರೆ.

ಮೇಲಾಧಿಕಾರಿಗಳ ಸೂಚನೆ ನಿರ್ಲಕ್ಷಿಸಿ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾಗಿರುವುದು ಹಾಗೂ ಸಾರ್ವ ಜನಿಕರ ದೂರುಗಳಿಗೆ ಸ್ಪಂದಿಸದೆ ಮತ್ತು ಕಂದಾಯ ವಸೂಲಾತಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಅವರನ್ನು ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಅಧಿಕಾರಿ ಇಬ್ರಾಹಿಂ ಅವರು ಕರ್ತವ್ಯದಲ್ಲಿದ್ದೂ ಪ್ರಗತಿ ಪರಿಶೀಲನಾ ಸಭೆಗಳಿಗೆ ಗೈರುಹಾಜರಾಗುತ್ತಿದ್ದರು ಹಾಗೂ ಕಂದಾಯ ವಸೂಲಾತಿ ಕುಂಠಿತ ಗೊಳ್ಳಲು ಕಾರಣರಾಗಿದ್ದರು. ಇದರೊಂದಿಗೆ, ಕಚೇರಿಯ ಕೆಲಸ ಹಂಚಿಕೆ ಪುಸ್ತಕ ಹಾಗೂ ಸಿಬ್ಬಂದಿ ಹಾಜರಾತಿ ಪುಸ್ತಕ ನಿರ್ವಹಣೆಯಲ್ಲೂ ಲೋಪವೆಸಗಿದ್ದರು.

ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಆಪ್ತ ಕಾರ್ಯ ದರ್ಶಿ ವೀರಭದ್ರಪ್ಪ ಅವರು ವಿದ್ಯುತ್ ಸಮಸ್ಯೆ ಕುರಿತು ಕಾನ್ಸರೆನ್ಸ್‌ ಕರೆ ಮೂಲಕ ವಿಚಾರಿಸಿದಾಗ, ನನಗೆ ಉಳವಿ ಶಾಖೆಯಲ್ಲಿ ಕೆಲಸ ಮಾಡಲು ಇಷ್ಟವಿಲ್ಲ, ನೀವು ಏನು ಬೇಕಾದರೂ ಮಾಡಿ ಎಂದು ಇಬ್ರಾಹಿಂ ಅನುಚಿತವಾಗಿ ಮಾತನಾಡಿ ಕರೆಯನ್ನು ಕಡಿತಗೊಳಿಸಿದ್ದರು. ಅಲ್ಲದೆ, ಕಳೆದ ಏಪ್ರಿಲ್‌ನಲ್ಲಿ ಗಾಳಿ-ಮಳೆಗೆ 25 ವಿದ್ಯುತ್ ಕಂಬಗಳು ಉರುಳಿ ಬಿದ್ದಾಗಲೂ ಘಟನಾ ಸ್ಥಳಕ್ಕೆ ಭೇಟಿ ನೀಡದೆ, ಮೇಲಾಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿದ್ದರು ಎಂದು ಜ್ಞಾಪನಾ ಪತ್ರ ದಲ್ಲಿ ಆರೋಪಿಸಲಾಗಿದೆ.

ಇತ್ತೀಚೆಗೆ ನಡೆದ ಕೆ.ಡಿ.ಪಿ ಸಭೆಯಲ್ಲೂ ಇಬ್ರಾಹಿಂ ಅವರು ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಕರೆಗಳನ್ನು ಸ್ವೀಕರಿಸುತ್ತಿಲ್ಲ ಮತ್ತು ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ ಎಂದು ಸಚಿವರಿಗೆ ದೂರುಗಳು ಬಂದಿದ್ದವು. ಈ ಎಲ್ಲಾ ಕರ್ತವ್ಯ ಲೋಪ ಹಾಗೂ ಇಲಾಖೆಯ ಘನತೆಗೆ ಕುಂದು ಉಂಟು ಮಾಡಿದ ಹಿನ್ನೆಲೆ ಇಲಾಖಾ ವಿಚಾರ ಣೆಯನ್ನು ಕಾಯ್ದಿರಿಸಿ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಮೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಎಂಜಿನಿಯರ್‌ಆದೇಶಿಸಿದ್ದಾರೆ.