ಮನೆ Blog ಠಾಣೆಯಲ್ಲಿಯೆ ನೇಣಿಗೆ ಕೊರಲೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಹೆಡ್ ಕಾನ್‌ಸ್ಟೇಬಲ್..!!

ಠಾಣೆಯಲ್ಲಿಯೆ ನೇಣಿಗೆ ಕೊರಲೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಹೆಡ್ ಕಾನ್‌ಸ್ಟೇಬಲ್..!!

29
0

ಶಿವಮೊಗ್ಗ: ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಡ್ ಕಾನ್‌ಸ್ಟೇಬಲ್‌ ಮೊಹಮದ್ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ನಿನ್ನೆ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.

ರಾತ್ರಿ ಠಾಣೆಯಲ್ಲೆ ಮೊಹಮದ್ ಝಕ್ರಿಯ ಅವರು ನೇಣಿಗೆ ಕೊರಳೊಡ್ಡಿದ್ದಾರೆ. ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ‘ಅವರಿಗೆ ಅರೋಗ್ಯ ಸಮಸ್ಯೆಯೂ ಇತ್ತು.ವಾಟ್ಸಪ್ ಗ್ರೂಪ್ ನಲ್ಲಿ ಡೆತ್ ನೋಟ್ ಫಾರ್ವಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಅಂತ ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ. ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ’ ಎಂದು ತಿಳಿಸಿದ್ದಾರೆ.

✒️..ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ