ಮನೆ Blog ಡಿ.17 ರ ಬುಧವಾರ ಸಾಗರ ಬಂದ್..!! ಜಿಲ್ಲೆಗಾಗಿ ಹಕ್ಕೊತ್ತಾಯ..!!

ಡಿ.17 ರ ಬುಧವಾರ ಸಾಗರ ಬಂದ್..!! ಜಿಲ್ಲೆಗಾಗಿ ಹಕ್ಕೊತ್ತಾಯ..!!

64
0

ಸಾಗರ: ಸಾಗರದ ಅಭಿವೃದ್ಧಿಗೆ ಕಾಣದ ಕೈಗಳು ಅಡ್ಡಿಪಡಿಸುತ್ತಿವೆ. ಆದರೆ ಸಾಗರ ಜಿಲ್ಲೆಯಾಗುವುದು ಅನಿವಾರ್ಯ. ಡಿ.17 ರಂದು ಬಂದ್‌ಗೆ ಸಾರ್ವಜನಿಕರು ಸಹಕಾರ ನೀಡಬೇಕು. ಶಾಂತಿಯುತವಾಗಿ ನಮ್ಮ ಹಕ್ಕೊತ್ತಾಯ ಮಂಡಿಸೋಣ ಎಂದು ಸಾಗರ ಜಿಲ್ಲಾ ಹೋರಾಟ ಸಮಿತಿಯ ತೀ.ನ.ಶ್ರೀನಿವಾಸ್ ಮನವಿ ಮಾಡಿದರು.

ಇವರು ”ಸಾಗರ ಬಂದ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯ ಮಂಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ’ ಎಂದು ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

ಸಾಗರ ನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸುವಂತೆ ಒತ್ತಾಯಿಸಿ -ಡಿ. 17ರಂದು ಸಾಗರ ಬಂದ್‌ ನಡೆಸಲಾ ಗುತ್ತಿದೆ. ಆ ದಿನ ಸಾರ್ವಜನಿಕರು, ಸಂಘ-ಸಂಸ್ಥೆಯವರು, ಅಂಗಡಿ ಮಾಲೀಕರು, ವಾಣಿಜ್ಯೋದ್ಯಮಿಗಳು ಸ್ವಯಂಪ್ರೇರಿತ ವಾಗಿ ತಮ್ಮ ಉದ್ಯಮಗಳನ್ನು ಸ್ಥಗಿತಗೊಳಿಸುವ ಮೂಲಕ ಸಂಪೂರ್ಣ ಸಹಕಾರ ನೀಡಬೇಕು.

‘ಸಾಗರವನ್ನು ಜಿಲ್ಲೆಯಾಗಿಸಬೇಕೆಂದು ದಶಕಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಇದಕ್ಕೆ ಬೆಲೆ ಸಿಗುತ್ತಿಲ್ಲ. ಬೆಂಬಲ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರೆ ಶಾಸಕರು ಬಂದರೆ ಅವರ ಜೊತೆ ಇರುತ್ತೇನೆ ಎಂದು ಹೇಳುತ್ತಿದ್ದಾರೆ’ ಎಂದರು.

‘ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿ ಬಳಿ ನಿಯೋಗ ಕರೆದುಕೊಂಡು ಹೋಗುವ ಭರವಸೆ ಇನ್ನೂ ಈಡೇರಿಲ್ಲ. ಶಾಸಕರು ಅನೇಕ ಬಾರಿ ಮುಖ್ಯಮಂತ್ರಿಯವರ ನ್ನು ಭೇಟಿಯಾಗಿದ್ದಾರೆ. ಆದರೆ ಸಾಗರ ಜಿಲ್ಲೆ ಮಾಡುವ ವಿಷಯ ಪ್ರಸ್ತಾಪಿಸದೇ ಇರುವುದು ಬೇಸರ ತರಿಸಿದೆ’ ಎಂದು ಹೇಳಿದರು.

ಕೆಲವು ವರ್ಷಗಳಿಂದ ಅನೇಕಜಿಲ್ಲೆಗಳನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆಯ ಮಾನ್ಯತೆ ನೀಡಲಾಗಿದೆ. ಬೆಳಗಾವಿ, ತುಮಕೂರು, ಉತ್ತರ ಕನ್ನಡ ಜಿಲ್ಲೆಗಳನ್ನೂ ವಿಭಜಿಸಿ ಪ್ರತ್ಯೇಕ ಜಿಲ್ಲೆ ಮಾಡಬೇಕೆಂಬ ಹೋರಾಟ ನಡೆಯುತ್ತಿದೆ.ಆದರೆ ನಮ್ಮ ಹೋರಾಟಕ್ಕೆ ಜನಪ್ರತಿನಿಧಿಗಳಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ. ಅದ್ದರಿಂದ ಸಾಗರ ಬಂದ್ ಮೂಲಕ ಹಕ್ಕೊತ್ತಾಯ ಮಂಡಿಸಲು ಮುಂದಾಗಿದ್ದೇವೆ’ ಎಂದು ಜಿಲ್ಲಾ ಹೋರಾಟ ಸಮಿತಿಯ ಸುಂದರ ಸಿಂಗ್ ತಿಳಿಸಿದರು.

ಹೋರಾಟ ಸಮಿತಿಯ ಮಂಜುನಾಥ ಆಚಾರ್, ತಾರಾ ಮೂರ್ತಿ, ಕೆ.ವಿ.ಜಯರಾಮ್, ಮಹ್ಮದ್ ಖಾಸಿಂ, ಅಕ್ಟರ್ ಖಾನ್, ವೆಂಕಟೇಶ್, ದೇವು ಅಲಳ್ಳಿ ಹಾಜರಿದ್ದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t