ಶಿವಮೊಗ್ಗ-ಡಿ:ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ವತಿಯಿಂದ 2025 ಡಿಸೆಂಬರ್ 28, 29 ಮತ್ತು 30 ರಂದು ಮೂರುದಿನಗಳ ಕಾಲ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವನ್ನು ಯಾದಗಿರಿಯ ಜಿಲ್ಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವೈಜ್ಞಾನಿಕ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಡಿ.ರವಿಕುಮಾರ್ ಹೇಳಿದರು.
ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಡಾ.ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಈ ಬಾರಿ ಪ್ರಗತಿಪರ ಚಿಂತಕ ಹಿರಿಯ ಪತ್ರಕರ್ತ ವಿಶ್ವರಾಧ್ಯ ಸತ್ಯಂಪೇಟೆ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ವೈಜ್ಞಾನಿಕ ಸಮ್ಮೇಳನಕ್ಕೆ ರಾಜ್ಯದ ಉದ್ದಗಲಕ್ಕೂ ಸಹಸ್ರಾರು ಸಂಖ್ಯೆಲ್ಲಿ ಜನರು ಭಾಗವಹಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಅನೇಕ ಸಾಧಕರಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ವಿಶೇಷ “ಸಾಹಿತ್ಯ ಸೇವಾ ರತ್ನ” ಪ್ರಶಸ್ತಿಯನ್ನು ವಿ.ಟಿ.ಸ್ವಾಮಿ ಸಾಗರ ಇವರಿಗೆ, ಸಾಮಾಜಿಕ ಕ್ಷೇತ್ರದಲ್ಲಿ ಶಿವಮೊಗ್ಗದ ವಿರೂಪಾಕ್ಷ ಎಸ್.ಡಿ ಹೆಚ್.ಎನ್.ಪ್ರಶಸ್ತಿ ಹಾಗೂ ಮಹಿಳಾ ಕ್ಷೇತ್ರದಿಂದ ಸೊರಬದ ಪವಿತ್ರ ಎ.ವಿ ಇವರಿಗೆ ನೀಡಲಾಗುವುದು ಈ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅನೇಕ ಮಂತ್ರಿಗಳು ಸಂಸದರು, ಶಾಸಕರು ಗಣ್ಯರು ಭಾಗವಹಿಸಲಿದ್ದಾರೆ.ಅನೇಕ ಗೋಷ್ಠಿಗಳು, ಸಾಂಸ್ಕೃತಿಕ ವೈಭವ ಸಾಧಕರಿಗೆ ಸನ್ಮಾನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ವಿಶೇಷವಾಗಿ ಸಾಗರದ ವಿ.ಟಿ.ಸ್ವಾಮಿ ಅವರ ಸುದೀರ್ಘ ಸೇವೆಯನ್ನು ಗುರುತಿಸಿ ಸಾಹಿತ್ಯ ಕ್ಷೇತ್ರದಲ್ಲಿ “ವಿಶೇಷ ಸಾಹಿತ್ಯ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಸಾಹಿತ್ಯ ಕ್ಷೇತ್ರದಲ್ಲಿ “ವಿಶೇಷ ಸೇವಾ ರತ್ನ ಪ್ರಶಸ್ತಿ” ವಿ.ಟಿ.ಸ್ವಾಮಿ ಸಾಗರ:
ಕಳೆದ ಮೂರುವರೆ ದಶಕಗಳಿಂದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಪತ್ರಿಕೋದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಂದಿರುವ ಇವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದು ಈಗಾಗಲೇ ಮೂವತ್ತೈದಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ ಅರ್ಪಿಸಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿಯನ್ನು ಪಡೆದಿರುವ ಇವರು ಸ್ಥಳೀಯ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅನೇಕ ಪತ್ರಿಕೆಗಳಲ್ಲಿ ವಿವಿಧ ವಿಷಯಗಳ ಕುರಿತು ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ, ಕವಿಗೋಷ್ಠಿ, ವಿವಿಧ ವಿಚಾರಗೋಷ್ಠಿ, ಸಮ್ಮೇಳನಗಳಲ್ಲಿ ವಿದ್ವತ್‌ಪೂರ್ಣ ವಿಷಯಗಳನ್ನು ಮಂಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನಮನ ಸೆಳೆದಿದ್ದಾರೆ. ಹಲವಾರು ಸಮ್ಮೇಳನಗಳನ್ನು ಹಾಗೂ ಉತ್ಸವಗಳನ್ನು ಆಯೋಜಿಸಿದ ಕೀರ್ತಿ ಇವರಿಗಿದೆ. ಶಿಕ್ಷಣ ಸಾಹಿತ್ಯ ಶಿಬಿರ, ಕಾರ್ಯಾಗಾರಗಳನ್ನು ಆಯೋಜನೆ ಮಾಡಿ ಮಾರ್ಗದರ್ಶನ ನೀಡುವ ಕೆಲಸವನ್ನು ಮಾಡುತ್ತ ಬಂದಿದ್ದಾರೆ.
ಸಾರ್ವಜನಿಕವಾಗಿ ಗುರುತಿಸಿಕೊಂಡಿರುವ ಇವರು, ಸ್ಥಳೀಯ, ತಾಲೂಕು ಜಿಲ್ಲಾ ಹಾಗೂ ರಾಜ್ಯ ರಾಷ್ಟ್ರ ಮಟ್ಟದ ಅನೇಕ ಕಾರ್ಯಕ್ರಮಗಳ ಸಂಘಟನೆ, ನಿರ್ವಹಣೆ ಹಾಗೂ ನಿರೂಪಣೆ ಕಾರ್ಯವನ್ನು ಲೀಲಾಜಾಲವಾಗಿಸಿದ್ದಾರೆ. ಇಂತಹ ಬಹುಮುಖ ಪ್ರತಿಭೆ ವಿ.ಟಿ.ಸ್ವಾಮಿ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ “ವಿಶೇಷ ಸಾಹಿತ್ಯ ಸೇವಾ ರತ್ನ” ಪ್ರಶಸ್ತಿ ಸಂದಿರುವುದು ತಾಲೂಕು ಹಾಗೂ ಜಿಲ್ಲೆಗೆ ಹೆಮ್ಮೆಯ ಸಂಗತಿ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









