ಮನೆ Blog ತೀರ್ಥಹಳ್ಳಿಯ ಅಭಿವೃದ್ಧಿಗೆ ನೂರಕ್ಕೂ ಹೆಚ್ಚು ಕಾಲುಸಂಕಗಳ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿಗೆ ಶಾಸಕ ಆರಗ ಜ್ಞಾನೇಂದ್ರ...

ತೀರ್ಥಹಳ್ಳಿಯ ಅಭಿವೃದ್ಧಿಗೆ ನೂರಕ್ಕೂ ಹೆಚ್ಚು ಕಾಲುಸಂಕಗಳ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿಗೆ ಶಾಸಕ ಆರಗ ಜ್ಞಾನೇಂದ್ರ ಮನವಿ..!!

10
0

✒️..ಅಮಿತ್ ಆರ್ ಆನಂದಪುರ

ತೀರ್ಥಹಳ್ಳಿ: ಮಲೆನಾಡಿನ ಭಾಗದಲ್ಲಿ ಮಳೆಗಾಲ ಎದುರಿಸಲು ಸಿದ್ಧತೆ ಹಾಗೂ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಮನವಿ ಪತ್ರ ಸಲ್ಲಿಸಿದರು.

ಎನ್.ಆರ್. ಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸೇತುವೆ ಉದ್ಘಾಟನೆ ಕಾರ್ಯಕ್ರಮ ಹಾಗೂ ಹುಲಿಕಲ್ ಘಾಟಿಯ ಪರಿಶೀಲನೆಗಾಗಿ ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ಶಾಸಕರು, ಕ್ಷೇತ್ರದ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.

ಮನವಿಯ ಪ್ರಮುಖ ಅಂಶಗಳು:

ಕಾಲುಸಂಕಗಳ ನಿರ್ಮಾಣ:

ಮಲೆನಾಡಿನ ಗ್ರಾಮೀಣ ಭಾಗಗಳಲ್ಲಿ ಹಳ್ಳ-ಕೊಳ್ಳಗಳನ್ನು ದಾಟಲು ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ, ಕ್ಷೇತ್ರದ ವಿವಿಧೆಡೆ ನೂರಕ್ಕೂ ಹೆಚ್ಚು ಕಾಲುಸಂಕಗಳನ್ನು ನಿರ್ಮಿಸಲು ವಿಶೇಷ ಅನುದಾನ ನೀಡಬೇಕೆಂದು ಶಾಸಕರು ಒತ್ತಾಯಿಸಿದರು.

ಮಳೆಗಾಲದ ಮುನ್ನೆಚ್ಚರಿಕೆ: “ಮುಂದೆ ಮಳೆಗಾಲ ಪ್ರಾರಂಭವಾಗುವುದರಿಂದ ನದಿ ಮತ್ತು ಹಳ್ಳಗಳ ಪಕ್ಕದಲ್ಲಿರುವ ಜನವಸತಿ ಪ್ರದೇಶಗಳಿಗೆ ಕಾಲುಸಂಕಗಳ ಅನಿವಾರ್ಯತೆ ಇದೆ. ಈಗಾಗಲೇ ಹಲವೆಡೆ ಹಳೆಯ ಸಂಕಗಳು ದುಸ್ಥಿತಿಯಲ್ಲಿದ್ದು, ಅವಘಡಗಳು ಸಂಭವಿಸುವ ಮುನ್ನ ಅವುಗಳನ್ನು ಸರಿಪಡಿಸಬೇಕು,” ಎಂದು ಶಾಸಕರು ಸಚಿವರ ಗಮನ ಸೆಳೆದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t