Home Shivamogga Sagara ದೆಹಲಿ ಮಾತುಕತೆ ಸಕಾರಾತ್ಮಕ: ಸಚಿವ ಸ್ಥಾನಕ್ಕೆ ಗ್ರೀನ್ ಸಿಗ್ನಲ್ – ಶಾಸಕ ಗೋಪಾಲಕೃಷ್ಣ ಬೇಳೂರು..!!

ದೆಹಲಿ ಮಾತುಕತೆ ಸಕಾರಾತ್ಮಕ: ಸಚಿವ ಸ್ಥಾನಕ್ಕೆ ಗ್ರೀನ್ ಸಿಗ್ನಲ್ – ಶಾಸಕ ಗೋಪಾಲಕೃಷ್ಣ ಬೇಳೂರು..!!

51
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.4687961, 0.4082499);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;

✒️..ಅಮಿತ್ ಆರ್ ಆನಂದಪುರ

ಆನಂದಪುರ:ದೆಹಲಿ ಯಲ್ಲಿ ವರಿಷ್ಠರ ಭೇಟಿಯ ವೇಳೆ ನಡೆದ ಮಾತುಕತೆಗಳು ಸಕಾರಾತ್ಮಕವಾಗಿದ್ದು, ಸಚಿವ ಸ್ಥಾನ ದೊರಕುವ ಪಾಸಿಟಿವ್ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಸುಮಾರು 30 ಮಂದಿ ಹಿರಿಯ ಶಾಸಕರು ಒಟ್ಟಾಗಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಹಕ್ಕುಗಳನ್ನು ಮನವರಿಕೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ನಮಗೆ ಸಚಿವ ಸ್ಥಾನ ದೊರಕಲು ಗ್ರೀನ್ ಸಿಗ್ನಲ್ ದೊರೆತಂತಾಗಿದೆ ಎಂದರು.

ಎರಡುವರೆ ವರ್ಷಗಳ ಬಳಿಕ ಸಚಿವ ಸಂಪುಟ ಪುನರ್‌ರಚನೆ ಆಗಬೇಕು ಎಂಬ ಮಾತುಕತೆ ನಡೆದಿದ್ದರೂ, ಮೂರು ವರ್ಷಗಳಾದರೂ ಅದು ನೆರವೇರಿಲ್ಲ. ಇದರಿಂದ ಅನೇಕ ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆ ನಮ್ಮ ಹಕ್ಕುಗಳನ್ನು ಕೇಳಿ ಬಂದಿದ್ದೇವೆ ಎಂದರು.

ಇನ್ನು ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ಆಗುತ್ತಿಲ್ಲ. ಚುನಾವಣಾ ಫಲಿತಾಂಶ ಹೊರಬಂದ ಬಳಿಕ ಈ ವಿಷಯದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಾಗರ ನಗರಸಭಾ ಸದಸ್ಯ ಗಣಪತಿ ಮಂಡಗಳಲೆ, ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲಾವಿಗೆರೆ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಹಾಗೂ ಪ್ರಮುಖರು ಉಪಸ್ಥಿತರಿದ್ದರು.