ಮನೆ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ..!!

ದ್ವಿತೀಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ..!!

40
0

ಬೆಂಗಳೂರು; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದದೆ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಾರವಾಗಿ ಏ.30ರಿಂದ ಮೇ 13ರವರೆಗೆ ನಡೆಯಲಿವೆ. ಬಹುತೇಕ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ, ಸಂಗೀತ ಮತ್ತು ಎನ್ ಎಸ್‌ಕ್ಯೂಎಫ್ ವಿಷಯಗಳು ಮಧ್ಯಾಹ್ನ 2ರಿಂದ4.15ರವರೆಗೆನಡೆಯಲಿವೆ.

ಪರೀಕ್ಷೆ2ಕ್ಕೆ ಅರ್ಜಿ ಸಲ್ಲಿಸಲು ಏ.17 ಕೊನೆಯ ದಿನ. ಅಭ್ಯರ್ಥಿಗಳು ಪರೀಕ್ಷಾ ಮಂಡಳಿಯ ವೆಬ್ ಸೈಟ್ http://kseab.karnataka.gov.in ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಪರೀಕ್ಷೆ -1ರಲ್ಲಿ ಅನುತ್ತೀರ್ಣ ಗೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಶುಲ್ಕ ಇರುವುದಿಲ್ಲ.

ಏ .30: ಕನ್ನಡ, ಅರೇಬಿಕ್ | ಮೇ 2: ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ | ಮೇ 4: ಇಂಗ್ಲಿಷ್ ಮೇ 5: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ | ಮೇ 6: ಅರ್ಥಶಾಸ್ತ್ರ, ಜೀವಶಾಸ್ತ್ರ, ಇತಿಹಾಸ, ಭೌತಶಾಸ್ತ್ರ | ಮೇ7: ಇತಿಹಾಸ, ಗಣಿತ, ಗೃಹವಿಜ್ಞಾನ ಮೇ8:ರಾಜ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್‌ಸೈನ್ಸ್ | ಮೇ 9: ಹಿಂದಿ । ಮೇ 11: ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ ಮೇ12: ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲ ಗಣಿತ । ಮೇ 13: (ಬೆಳಗ್ಗೆ) ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್- (ಮಧ್ಯಾಹ್ನ) ಹಿಂದೂಸ್ತಾನಿ ಸಂಗೀತ, ಎನ್‌ಎಸ್ ಕ್ಯೂಎಫ್ ಕೋರ್ಸ್‌ಗಳ ಪರೀಕ್ಷೆ ನಡೆಯಲಿದೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ