ಮನೆ ಶಿವಮೊಗ್ಗ “ ಧರ್ಮ ಸಂಸ್ಕಾರ ಅಳವಡಿಸಿಕೊಂಡರೆ ಸುಸಂಸ್ಕೃತ ಸಮಾಜ ನಿರ್ಮಾಣ- ಮೂಲೆಗದ್ದೆ ಶ್ರೀಗಳು..!!

“ ಧರ್ಮ ಸಂಸ್ಕಾರ ಅಳವಡಿಸಿಕೊಂಡರೆ ಸುಸಂಸ್ಕೃತ ಸಮಾಜ ನಿರ್ಮಾಣ- ಮೂಲೆಗದ್ದೆ ಶ್ರೀಗಳು..!!

11
0

ರಿಪ್ಪನ್ ಪೇಟೆ: ನಮ್ಮ ಜೀವನದಲ್ಲಿ ಧರ್ಮ ಸಂಸ್ಕಾರಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ” ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಮಹಾಸ್ವಾಮೀಜಿ ತಿಳಿಸಿದರು.

ಇವರು ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಶ್ರೀಮನ್ಮಹಾರಥೋತ್ಸವದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ. ಧರ್ಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ. ಭಾರತೀಯ ಧರ್ಮ ಸಂಸ್ಕೃತಿಯನ್ನು ವಿದೇಶಗಳೂ ಗೌರವದಿಂದ ಕಾಣುತ್ತಿವೆ ಎಂದರು.

ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಭಕ್ತರಲ್ಲಿ ಆತ್ಮೀಯತೆ ಹಾಗೂ ನೈತಿಕ ಮೌಲ್ಯಗಳನ್ನು ಹೆಚ್ಚಿಸುತ್ತವೆ. ಸಮಾಜದ ಉನ್ನತಿಗೆ ಧರ್ಮ ಮತ್ತು ಸಂಸ್ಕಾರದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ಧಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆರ್.ಈ. ಈಶ್ವರ ಶೆಟ್ಟಿ ವಹಿಸಿದ್ದರು.ಈ ಸಂದರ್ಭದಲ್ಲಿ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಎನ್. ಸತೀಶ್, ಧರ್ಮದರ್ಶಿ ಸಮಿತಿ ನಿರ್ದೇಶಕಿ ಎಂ.ಡಿ. ಇಂದ್ರಮ್ಮ, ಭೀಮರಾಜ ಗೌಡ,ಗಣೇಶ್ ಕಾಮತ್, ನಾಡಕಚೇರಿ ಉಪತಹಶೀಲ್ದಾರ್ ಗೌತಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t