ಶಿವಮೊಗ್ಗದ ಬಿ.ಹೆಚ್ ರಸ್ತೆದಲ್ಲಿರುವ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಾರ್ಚ್ 6ರಂದು ಸರಸ್ವತಿ ಪೂಜೆ ಹಾಗೂ 2025–26ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲರಾದ ಶ್ರೀಮತಿ ಪಂಕಜ ಎಸ್.ಸಿ. ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಇದೇ ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮಹೇಶ್ ದಾನಪ್ಪ ಎಲಿಗಾರ್ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಯತೀಶ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಿಕ್ಷಣದ ಮೇಲಿನ ತಮ್ಮ ಕಾಳಜಿಯನ್ನು ತೋರಿದ ಮಹೇಶ್ ದಾನಪ್ಪ ಎಲಿಗಾರ್ ಅವರು 2024–25ನೇ ಸಾಲಿನ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ತಲಾ ₹1000 ಪ್ರೋತ್ಸಾಹಧನ ನೀಡಿ ಗೌರವಿಸಿದರು. ವಿದ್ಯಾರ್ಥಿನಿಯರು ಶ್ರಮಪಟ್ಟು ಓದಿ ಉತ್ತಮ ಫಲಿತಾಂಶ ಸಾಧಿಸಿ ಶಾಲೆಗೆ ಕೀರ್ತಿ ತರಬೇಕು ಎಂದು ಅವರು ಪ್ರೇರಣಾದಾಯಕ ಮಾತುಗಳನ್ನಾಡಿದರು.
ಇದೇ ವೇಳೆ 17 ವರ್ಷಗಳ ಕಾಲ ಅಡುಗೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ ಲಕ್ಷ್ಮಮ್ಮ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
✒️..ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ :https://chat.whatsapp.com/CnYYumPSez6AMYyw8cHG9A?mode=ac_t












