ಶಿವಮೊಗ್ಗ, ಜು. 13: ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆಗೆ ಸಂಬಂಧಿಸಿದ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ತರಬೇತಿಯು ಜುಲೈ 20, 2026 ರಿಂದ ಆಗಸ್ಟ್ 18, 2026ರವರೆಗೆ ನಡೆಯಲಿದೆ. ತರಬೇತಿಯಲ್ಲಿ ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕೀಸ್, ಕೋಕೊನಟ್ ಬಿಸ್ಕತ್ತು, ಮಸಾಲಾ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕೀಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್‌ಕೇಕ್, ಚಾಕೊಲೇಟ್ ಕೇಕ್, ಜಾಮ್ ರೋಲ್, ಜೆಲ್ಲಿ ಕೇಕ್, ಪೇಸ್ಟ್ರಿ ಕೇಕ್, ಬಟರ್ ಐಸಿಂಗ್, ಡೋನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಫ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಸೇರಿದಂತೆ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ₹4,500 ತರಬೇತಿ ಶುಲ್ಕ ಪಾವತಿಸಿ ಜುಲೈ 18, 2026ರೊಳಗೆ ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.ಆಸಕ್ತರು 9449187763 –9686555897 ಸಂಪರ್ಕಿಸಿ.
ಜಾಹೀರಾತು:












