ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯಲಿರುವ ಬೃಹತ್ ಗೀತೋತ್ಸವದ ನಿಮಿತ್ತ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನ. 28ರಂದು ಉಡುಪಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಪ್ರಕಟಿಸಿದ್ದು,ನ. 28 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಆದೇಶಿಸಲಾಗಿದೆ.

ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್-ಬನ್ನಂಜೆ-ಶಿರಿಬೀಡು-ಕಲ್ಪಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರಬೇಕು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮೂಲಕ ಉಡುಪಿಗೆ ಬರಬೇಕು.ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ;https://chat.whatsapp.com/CnYYumPSez6AMYyw8cHG9A?mode=ac_t









