ಮನೆ ಶಿವಮೊಗ್ಗ ಪದವಿ ವಿದ್ಯಾರ್ಥಿನಿಯರಿಗೆ ಸ್ಕಾಲರ್ ಶಿಪ್..!!

ಪದವಿ ವಿದ್ಯಾರ್ಥಿನಿಯರಿಗೆ ಸ್ಕಾಲರ್ ಶಿಪ್..!!

55
0

ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿ ರುವ ವಿದ್ಯಾರ್ಥಿನಿಯರಿಗೆ ರೂ. 32,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯನ್ನು ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಪದವಿಯನ್ನು ಖಾಸಗಿ ಅಥವಾ ಸರ್ಕಾರಿ ಯಾವುದಾದರೂ ಕಾಲೇಜಿನಲ್ಲಿ ಓದುತ್ತಿರುವಂತಹ ಪದವಿ ಮೊದಲನೇ ವರ್ಷದ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜ.31 ಕಡೆಯ ದಿನವಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಇತರೆ ಹೆಚ್ಚಿನ ಮಾಹಿತಿಗಾಗಿ ಈ https://www.youtube.com/watch?v=dR0q9nozo-4, https://www.youtube.com/@azimpremjischolarshipಯೂಟ್ಯೂಬ್ ಲಿಂಕನ್ನು ರೂ ಸಂಪರ್ಕಿಸ ಬಹುದೆಂದು ಶಿವಮೊಗ್ಗ ಜಿ.ಪಂ.ಸಿಇಓ ಎನ್ ಹೇಮಂತ್ ತಿಳಿಸಿದ್ದಾರೆ.

✒️..ಅಮಿತ್ ಆರ್ ಆನಂದಪುರ

ಹೆಚ್ಚಿನ ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ