ಹೊಸನಗರ: ತಾಲೂಕಿನ ವಸವೆ ಗ್ರಾಮದಲ್ಲಿ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮಹತ್ಯೆಗೆ ಶರಣಾದ ಯುವತಿ ಯಾಗಿದ್ದಾಳೆ.
ಮೃ ರಚನಾ (20) ಅವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಿಂದ ಮನೆಗೆ ಬಂದ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಚನಾ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಯುವತಿಯ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









