Home Shivamogga Sagara ಪಿಎಸ್ಐ ಪ್ರವೀಣ್ ನೇತೃತ್ವದ ದಾಳಿ: ಕಾಡಿನಲ್ಲಿ ಅಕ್ರಮ ತೂರಬಿಲ್ಲೆ ಜೂಜಾಟದ ಮೇಲೆ ಬಲೆ; ಮೂವರು ಬಂಧನ…!!

ಪಿಎಸ್ಐ ಪ್ರವೀಣ್ ನೇತೃತ್ವದ ದಾಳಿ: ಕಾಡಿನಲ್ಲಿ ಅಕ್ರಮ ತೂರಬಿಲ್ಲೆ ಜೂಜಾಟದ ಮೇಲೆ ಬಲೆ; ಮೂವರು ಬಂಧನ…!!

50
0

✒️..ಅಮಿತ್ ಆರ್ ಆನಂದಪುರ

ಆನಂದಪುರ, ಜು.13: ಅಕ್ರಮ ಚಟುವಟಿಕೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಹಾಗೂ ನೇತೃತ್ವದ ತಂಡ ಕಾಡಿನಲ್ಲಿ ನಡೆಯುತ್ತಿದ್ದ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜುಲೈ 12ರಂದು ಮಧ್ಯಾಹ್ನ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತೂರಬಿಲ್ಲೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಪ್ರವೀಣ್ ದಾಳಿ ನಡೆಸಿದರು.

ದಾಳಿಯ ವೇಳೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು, ಇತರೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹4,200 ನಗದು ಹಾಗೂ ₹1 ಮುಖಬೆಲೆಯ ಎರಡು ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಸಂತೋಷ್ (ತಂದೆ ಆನಂದ), ಶಿವು (ತಂದೆ ನಾಗರಾಜ) ಹಾಗೂ ಶಾಬಾಷ್ (ತಂದೆ ಭಾಷಾಸಾಬ್) ಎಂದು ಗುರುತಿಸಲಾಗಿದೆ.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಜಾಹೀರಾತು