ಸಾಗರ:
ಪ್ರತಿಭಾವಂತ ಮಕ್ಕಳಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುವ ಕೆಲಸ ಆಗಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹೇಳಿದರು.
ಅವರು ಇಲ್ಲಿನ ಎಸ್ ಎನ್ ನಗರ ಪ್ರಜ್ಞಾಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ವಿಶೇಷ ಪ್ರತಿಭೆ ಇರುತ್ತದೆ ಅಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಮಕ್ಕಳ ಮುಗ್ಧ ಮನಸ್ಸಿನಲ್ಲಿ ಉತ್ತಮವಾದ ಆಲೋಚನೆಗಳನ್ನು ಮೂಡಿಸುವ ಮೂಲಕ ಉತ್ತಮ ಸಮಾಜವನ್ನು ಕಟ್ಟಬೇಕಾಗಿದೆ ಆ ನಿಟ್ಟಿನಲ್ಲಿ ಶಾಲಾ ಹಂತದಲ್ಲಿಯೇ ಮೌಲ್ಯ ಶಿಕ್ಷಣವನ್ನು ನೀಡುವಂತಾಗಬೇಕು.

ಅಲ್ಲದೆ ಶಿಕ್ಷಕರು ಪೋಷಕರು ಹೆಚ್ಚಿನ ರೀತಿಯಲ್ಲಿ ಶ್ರಮವಹಿಸಬೇಕಾಗಿದೆ ತಾಲೂಕು ಶೈಕ್ಷಣಿಕವಾಗಿ ಸಾಕಷ್ಟು ಮುಂಚೂಣಿಯಲ್ಲಿದ್ದು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರಮುಖ ಸ್ಥಾನವನ್ನು ವಹಿಸಬೇಕಾಗಿದೆ ಎಂದರು .
ಮಕ್ಕಳ ಕಲಿಕೆಗೆ ಪೂರಕವಾದ ಪರಿಸರವನ್ನು ನಿರ್ಮಾಣ ಮಾಡಬೇಕಾಗಿದೆ ಉತ್ತಮ ಕಲಿಕೆಯಿಂದ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಆದ್ಯತೆಯನ್ನು ನೀಡಬೇಕಾಗಿದೆ ಎಂದರು.
ಜನತಾ ಬಾಲ ವಿಕಾಸ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ರಾಜಾನಂದನಿ ಕಾಗೋಡು ಅವರು ಮಾತನಾಡಿ ಮಕ್ಕಳ ಮನಸ್ಸಿನಲ್ಲಿ ಉತ್ತಮವಾದ ವಿಚಾರಗಳನ್ನು ತುಂಬಬೇಕಾಗಿದೆ ಜಾತ್ಯಾತೀತವಾಗಿ ಅವರನ್ನು ಬೆಳೆಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಹಾಗೂ ಸಾಂಸ್ಕೃತಿಕ ಸಾಹಿತ್ಯ ಮನಸ್ಸುಗಳನ್ನು ಬೆಳೆಸಬೇಕಾಗಿದೆ ಹಾಗಾಗಿ ಇಂತಹ ಕಲಿಕಾ ಚಟುವಟಿಕೆಗಳಿಂದ ಕ್ರಿಯಾಶೀಲವಾಗಿಸಲು ಸಾಧ್ಯವಾಗುತ್ತದೆ ಎಂದರು .

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಮಾತನಾಡಿ ಪ್ರತಿಭೆ ಯಾರ ಸ್ವತ್ತು ಅಲ್ಲ ಅಂತಹ ಪ್ರತಿಭೆಗಳನ್ನು ತಮ್ಮೊಳಗೆ ತಾವು ಬೆಳೆಸಿಕೊಳ್ಳುವ ಹಾಗೂ ಇಂತಹ ಅವಕಾಶಗಳನ್ನು ಬಳಸಿಕೊಳ್ಳಬೇಕಾಗಿದೆ ಆ ನಿಟ್ಟಿನಲ್ಲಿ ಇಲಾಖೆ ಉತ್ತಮವಾದ ಕೆಲಸವನ್ನು ಮಾಡುತ್ತಿದೆ ಎಂದರು .
ವೇದಿಕೆಯಲ್ಲಿ ಬಿಇಓ ಪರಶುರಾಮಪ್ಪ ಈ, ಡಾ. ಅನ್ನಪೂರ್ಣ, ಭೂಮೇಶ್, ಗಣಪತಿ ಮಂಡಗಳಲೆ, ಹೊಳೆಯಪ್ಪ, ಶಿಕ್ಷಕರ ಸಂಘಗಳ ಅಧ್ಯಕ್ಷರಾದ ಮಹಾಬಲೇಶ್ವರ್, ಲಕ್ಷ್ಮಣ್ ನಾಯಕ್, ಓಂಕಾರಪ್ಪ, ಕವಿರಾಜ್, ಚಂದ್ರಪ್ಪ, ಸದಾನಂದ ಶರ್ಮ, ಭಾರತೀ ಶರ್ಮ, ಕಮಲಾಕ್ಷಿ, ಪಾಲಾಕ್ಷಪ್ಪ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









