ಮನೆ Blog ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಕಟಣೆ..!!

ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಕಟಣೆ..!!

66
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

35 ಸ್ಥಾನಗಳಿಗೆ ಪೈಪೋಟಿ:

ಒಟ್ಟು 35 ಲಭ್ಯವಿರುವ ಸ್ಥಾನಗಳಿಗಾಗಿ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಮೊದಲು ಆನ್‌ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಕೆ ಮತ್ತು ದಿನಾಂಕ:

ನಿಗದಿತ ಅರ್ಜಿ ನಮೂನೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ (ಗ್ರೇಡ್-1 ಮತ್ತು 2) ಕಚೇರಿಗಳಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 4 ಕೊನೆಯ ದಿನಾಂಕವಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಿ:

ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಅಥವಾ ಪೋಷಕರು ಜಿಲ್ಲಾ ಉಪನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 08182-249241 ಅನ್ನು ಸಂಪರ್ಕಿಸಬಹುದಾಗಿದೆ