ಮನೆ ರಾಜ್ಯ ಪ್ರಧಾನಿ ಮೋದಿ ಚಿತ್ರಗುರ್ಗದ ಘೋರ ದುರಂತಕ್ಕೆ ಸಂತಾಪ. ಮೃತರ ಕುಟುಂಬಗಳಿಗೆ ಪರಿಹಾರ ಸೂಚನೆ..!!

ಪ್ರಧಾನಿ ಮೋದಿ ಚಿತ್ರಗುರ್ಗದ ಘೋರ ದುರಂತಕ್ಕೆ ಸಂತಾಪ. ಮೃತರ ಕುಟುಂಬಗಳಿಗೆ ಪರಿಹಾರ ಸೂಚನೆ..!!

28
0

ನವದೆಹಲಿ: ಚಿತ್ರದುರ್ಗದ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಜವರಗೊಂಡನ ಹಳ್ಳಿಯಲ್ಲಿ ಗುರುವಾರ(ಡಿ25) ನಸುಕಿನ 2 ಗಂಟೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಪರಿಣಾಮ ಕನಿಷ್ಠ 9 ಮಂದಿ ಸಜೀವ ದಹನ ಗೊಂಡಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘೋರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ್ದಾರೆ.

ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು ತಿಳಿಸಿದ್ದಾರೆ.

9 ಮಂದಿ ಪ್ರಯಾಣಿಕರು ಸಾವು: ಐಜಿ ರವಿಕಾಂತೇ ಗೌಡ ಪೂರ್ವ ವಲಯ ಐಜಿ ರವಿಕಾಂತೇ ಗೌಡ ಅವರು ಗುರುವಾರ ಬೆಳಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿ ‘ಪ್ರಾಥಮಿಕ ತನಿಖೆಯಲ್ಲಿ ಲಾರಿ ಚಾಲಕ ಸೇರಿ ಬಸ್ ನಲ್ಲಿದ್ದ 9 ಮಂದಿ ಪ್ರಯಾಣಿಕರು ಸಜೀವವಾಗಿ ದಹನಗೊಂಡು ಮೃತಪಟ್ಟಿದ್ದಾರೆ.ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನ ಪಕ್ಕ ಶಾಲಾ ಮಕ್ಕಳ ಪ್ರವಾಸದ ಬಸ್ ಕೂಡ ಇದ್ದಿತ್ತು, ಅದೃಷ್ಟವಶಾತ್ ಆ ಬಸ್ ನಲ್ಲಿದ್ದ ಯಾರೊಬ್ಬರಿಗೂ ಹಾನಿಯಾಗಿಲ್ಲ” ಎಂದು ತಿಳಿಸಿದ್ದಾರೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t