ಶಿವಮೊಗ್ಗ : ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್ ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.
ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್ ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955′ ಮತ್ತು ‘ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001’ ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.









