✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಬಂಡವಾಳ ಹೂಡಿಕೆ ಇಲ್ಲದೆ ಯಾವುದೇ ಉದ್ಯೋಗವನ್ನು ಆರಂಭಿಸುವುದು ಸಾಧ್ಯವಿಲ್ಲ ಎಂದು ಹಣಕಾಸು ವಿಶ್ಲೇಷಕರಾದ ಡಾ. ಆರ್. ಶಂಕರ್ ನಾರಾಯಣ್ ಅಭಿಪ್ರಾಯಪಟ್ಟರು.
ಇವರು ಮಂಗಳವಾರ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಿಭಾಗ ಆಯೋಜಿಸಿದ್ದ “ಪತ್ರಿಕೋದ್ಯಮದ ದೃಷ್ಟಿಕೋನದಿಂದ ಬಜೆಟ್” ವಿಷಯ ಕುರಿತ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳು ಬಜೆಟ್ ಅನ್ನು ಕೇವಲ ರಾಜಕೀಯ ದೃಷ್ಟಿಕೋನದಲ್ಲಿ ನೋಡದೆ ಅದನ್ನು ಸಾಮಾಜಿಕ ದೃಷ್ಟಿಕೋನದಲ್ಲಿ ನೋಡುವುದನ್ನು ಕಲಿಯಬೇಕು ಎಂದರು.
ನಮ್ಮ ದೇಶದಲ್ಲಿ ರೂಪಾಯಿ ಚಲಾವಣೆಯಾಗುತ್ತದೆ, ಆದರೆ ಅನ್ಯ ದೇಶಗಳಲ್ಲಿ ಅದನ್ನು ನೇರವಾಗಿ ಬಳಸಲು ಸಾಧ್ಯವಿಲ್ಲ. ಆದ್ದರಿಂದ ರಫ್ತು-ಆಮದು ಪ್ರಕ್ರಿಯೆಗಳ ಮೂಲಕವೇ ಇತರೆ ದೇಶಗಳೊಂದಿಗೆ ವ್ಯವಹಾರ ನಡೆಸಲಾಗುತ್ತದೆ ಎಂದರು.

ಜಿಎಸ್‌ಟಿ ಜಾರಿಗೆ ಬಂದ ನಂತರ ತೆರಿಗೆ ತಪ್ಪಿಸುವುದು ಅಸಾಧ್ಯವಾಗಿದೆ. ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಪ್ರತಿಯೊಬ್ಬರೂ ತೆರಿಗೆ ಕಟ್ಟುತ್ತಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥರಾದ ಡಾ. ವರ್ಗೀಸ್ ಪಿ.ಎ. ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ರಕ್ಷಿತ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು. ಭಾರ್ಗವಿ ಜಿ.ಆರ್ ಪ್ರಾರ್ಥಸಿ, ಮೇಘ ವಂದಿಸಿದರು.









