ಮನೆ ರಾಷ್ಟ್ರೀಯ ಬಿಗ್ ಬಾಸ್ ಕಾರ್ಯಕ್ರಮ ಬಂದು ಮಾಡುವಂತೆ ನೋಟಿಸ್….!!

ಬಿಗ್ ಬಾಸ್ ಕಾರ್ಯಕ್ರಮ ಬಂದು ಮಾಡುವಂತೆ ನೋಟಿಸ್….!!

82
0

ಬಿಗ್ ಬಾಸ್ ಸೀಸನ್ 12ಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರೋ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಲು ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಮಾಲೀನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆಯದೇ ಮನರಂಜನಾ ಪಾರ್ಕ್ ಓಪನ್ ಮಾಡಿರೋ ಆರೋಪ ಕೇಳಿಬಂದಿದೆ. ಅಲ್ಲದೇ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯದ ನೀರನ್ನ ಪರಿಸರಕ್ಕೆ ಬಿಡುವ ಮೂಲಕ ಮಾಲಿನ್ಯ ನಿಯಂತ್ರಣ ಕಾಯ್ದೆಗಳನ್ನ ಉಲ್ಲಂಘನೆ ಮಾಡಿರೋ ಆರೋಪ ಕೂಟ ಕೇಳಿಬಂದಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಕಾಯ್ದೆ 1981ರ ಸೆಕ್ಷನ್ 31, ಕಾಯ್ದೆ 1983 ನಿಯಮ 20(ಎ) ಅನ್ವಯ ತಕ್ಷಣದಿಂದಲೇ ಸ್ಟುಡಿಯೋ ಬಂದ್ ಮಾಡಲು ಆದೇಶ ಹೊರಡಿಸಿದ್ದು, ಕೂಡಲೇ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಸಿ ಕ್ರಮವಹಿಸಲು ರಾಮನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

ಜೊತೆಗೆ ತಕ್ಷಣದಿಂದಲೇ ಮನರಂಜನಾ ಪಾರ್ಕ್‌ಗೆ ವಿದ್ಯುತ್ ಸ್ಥಗಿತಗೊಳಿಸುವಂತೆ ಬೆಸ್ಕಾಂಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ.ಬಿಗ್ ಬಾಸ್ ಸೀಸನ್ 12ರ ಶೂಟಿಂಗ್ ಸೆಟ್ ಕೂಡ ಜಾಲಿವುಡ್ ಸ್ಟುಡಿಯೋದಲ್ಲೇ ನಿರ್ಮಾಣ ಆಗಿರೋದ್ರಿಂದ ಬಿಗ್ ಬಾಸ್ ಶೂಟಿಂಗ್ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ನ ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t