ಬೆಂಗಳೂರು: ರಾಮನಗರ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಸಾಗುತ್ತಿದ್ದ ‘ಬಿಗ್ಬಾಸ್ ಸೀಸನ್ 12’ಕ್ಕೆ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಹಾಗೂ ನಿಯಮಗಳ ಉಲ್ಲಂಘಿಸಿದ್ದಕ್ಕೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಕ್ಕೆ ಬೀಗ ಜಡಿದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ‘ಎಕ್ಸ್’ನಲ್ಲಿ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ‘ಪರಿಸರ ಕಾಯಿದೆ ಉಲ್ಲಂಘನೆ ಹಿನ್ನೆಲೆಯಲ್ಲಿ ‘ಬಿಗ್ ಬಾಸ್ ಸೀಸನ್ 12’ ಮುಚ್ಚಲು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಪರಿಸರ ಕಾಯಿದೆ ಉಲ್ಲಂಘಿಸಿದರೆ ಕ್ರಮ ಅನಿವಾರ್ಯ’ ಎಂದಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ಟೈನ್ಸೆಂಟ್ ಪ್ರೈ. ಲಿ. (ಜಾಲಿವುಡ್ ಸ್ಟುಡಿಯೋ) ಸಂಸ್ಥೆಗೆ ಜಲ ಕಾಯಿದೆ ಹಾಗೂ ವಾಯು ಕಾಯಿದೆಯಡಿ ಅಗತ್ಯ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಈ ಸ್ಟುಡಿಯೋಗೆ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆಯಾಗದ ಕಾರಣ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಎಸ್.ಟಿ.ಪಿ.(ತ್ಯಾಜ್ಯ ನಿರ್ವಹಣೆ) ಸರಿಯಾಗಿ ಕಾರ್ಯನಿರ್ವಹಿಸದಿರುವುದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿಲ್ಲದಿರುವುದು ಹಾಗೂ ಜನರೇಟರ್ಗಳಿಗೂ ಅಗತ್ಯ ಅನುಮತಿ ಇಲ್ಲದಿರುವುದು ಗಮನಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









