ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೈರಾಪುರದಲ್ಲಿ ಬೀಕರ ರಸ್ತೆ ಅಪಘಾತವಾಗಿದ್ದು ಸ್ಥಳದಲ್ಲೇ ಬೈಕ್ ಸವಾರ ಪ್ರಾಣವನ್ನು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ.
ಯಾರಿವರು..? ಹೇಗಾಗಿರಬಹುದು ಘಟನೆ..?
ಮೃತಪಟ್ಟವರು ತ್ಯಾಗರ್ತಿ ಸಮೀಪದ ಕೋಟೆಕೊಪ್ಪದ ನಿವಾಸಿಯಾದ ರಮೇಶ್ (55) ತಂದೆ ಸಣ್ಣಪ್ಪ ಎಂದು ತಿಳಿದು ಬಂದಿದ್ದು.ಇವರು ಶಿಕಾರಿಪುರದಿಂದ ತಮ್ಮ ಊರಿಗೆ ರಾಯಲ್ ಎನ್ಫೀಲ್ಡ್ ದ್ವಿಚಕ್ರ ವಾಹನದಲ್ಲಿ ಹೋಗುವ ವೇಳೆಗೆ ಬೈರಾಪುರದ ರಸ್ತೆಯ ಬದಿಗಿದ್ದ ನಾಮಫಲಕ್ಕೆ ಗುದ್ದಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿದಿದ್ದಂತೆ ಆನಂದಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
✒️..ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









