ಮನೆ Blog ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು: ಮಂಜಪ್ಪ..!!

ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು: ಮಂಜಪ್ಪ..!!

22
0

✒️..ಅಮಿತ್ ಆರ್ ಆನಂದಪುರ

ಆನಂದಪುರ: ನಮ್ಮ ಸಮುದಾಯದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆಯಬೇಕು. ಆರ್ಥಿಕ ಅಡಚಣೆ ಅಥವಾ ಇನ್ನಾವುದೇ ಕಾರಣಕ್ಕೆ ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಮಂಜಪ್ಪ ಟಿ ತಿಳಿಸಿದರು.

ಆನಂದಪುರ ಸಮೀಪದ ನೆವಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಸಮಗಾರ ಕ್ಷೇಮಾಭಿರುದ್ಧಿ ಸಂಘ’ದ ಪ್ರಥಮ ವರ್ಷದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣವು ಸಮುದಾಯದ ಪ್ರಗತಿಯ ಮೂಲಾಧಾರವಾಗಿದೆ. ವಿದ್ಯಾರ್ಥಿಗಳು ಇರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆಯುವುದರ ಜೊತೆಗೆ ನಿರ್ದಿಷ್ಟ ಗುರಿ ತಲುಪಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಷಣ್ಮುಖಪ್ಪ ಮಾತನಾಡಿ ಸಂಘಟನೆಯ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಂಗಕರ್ಮಿಗಳಾದ ಕೊಟ್ರಪ್ಪ , ಲೇಖಕರಾದ ಸೂರ್ಯಪ್ರಕಾಶ್ ಡಿ.ಹೆಚ್ ,ಕಾರ್ಯದರ್ಶಿ ರುದ್ರಪ್ಪ,ಖಜಾಂಚಿ ರಾಘವೇಂದ್ರ ಎನ್. ಡಿ, ಇನ್ನಿತರರು ಉಪಸ್ಥಿತರಿದ್ದರು.

ನಿರಂತರ ಸದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ನ ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t