ಮನೆ ಶಿವಮೊಗ್ಗ ರಂಜಾನ್ ಹಬ್ಬದ ದೇಣಿಗೆ ಎರಡು ಗುಂಪುಗಳ ನಡುವೆ ಸಂಘರ್ಷ/ಬಂಧನವಾಯಿತು 10 ಜನ..!!

ರಂಜಾನ್ ಹಬ್ಬದ ದೇಣಿಗೆ ಎರಡು ಗುಂಪುಗಳ ನಡುವೆ ಸಂಘರ್ಷ/ಬಂಧನವಾಯಿತು 10 ಜನ..!!

3
0

ಶಿಕಾರಿಪುರ;ರಂಜಾನ್ ಹಬ್ಬದ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಭಾನುವಾರ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು 10 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಸೀದಿಯಲ್ಲಿ ನಡೆದ ಸಭೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಪ್ರತಿ ಕುಟುಂಬವು ₹1,000 ದೇಣಿಗೆ ನೀಡಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ಈ ನಿರ್ಧಾರಕ್ಕೆ ಮತ್ತೊಂದು ಗುಂಪು ವಿರೋಧ ವ್ಯಕ್ತಪಡಿಸಿದ ಪರಿಣಾಮ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡು, ಎರಡೂ ಗುಂಪಿನವರು ಪರಸ್ಪರ ಕಲ್ಲು ಹಾಗೂ ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ.

ಘಟನೆಯ ಪರಿಣಾಮ ಶಿಕಾರಿಪುರ–ಶಿರಾಳಕೊಪ್ಪ ರಸ್ತೆ ನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ರಸ್ತೆಯುದ್ದಕ್ಕೂ ಕಲ್ಲುಗಳು ಬಿದ್ದಿದ್ದರಿಂದ ವಾಹನ ಸವಾರರು ಆತಂಕಕ್ಕೀಡಾದರು.

ಮಾಹಿತಿ ತಿಳಿದ ತಕ್ಷಣ ಶಿಕಾರಿಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಲಾಠಿ ಚಾರ್ಜ್ ಮೂಲಕ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದಡಿ 10 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಎರಡು ಗುಂಪುಗಳ ನಡುವೆ ಪರಸ್ಪರ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಹಿಂಸಾಚಾರ ಮರುಕಳಿಸದಂತೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

✒️..ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t