Home Blog ರೈತ ಮಕ್ಕಳಿಗೆ ಇಲ್ಲಿದೆ ನೋಡಿ ಅವಕಾಶ..!!

ರೈತ ಮಕ್ಕಳಿಗೆ ಇಲ್ಲಿದೆ ನೋಡಿ ಅವಕಾಶ..!!

3
0

ಶಿವಮೊಗ್ಗ.ಏ20: ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ. 21 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ನ್ನು ಅಂತಿಮ ದಿನಾಂಕವಾಗಿ ನಿಗದಿಗೊಳಿಸಲಾಗಿತ್ತು.ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ದೂರವಾಣಿ:08182-222794

ಮೊಬೈಲ್: 9686950460 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗಬತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.