ಮನೆ ಶಿವಮೊಗ್ಗ ವಿಜ್ಞಾನ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಗರ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ…!!

ವಿಜ್ಞಾನ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಗರ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ…!!

81
0

ಸಾಗರ:

ಸಾಗರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಅಂತರ ಕಾಲೇಜು ವಿಜ್ಞಾನ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ. ಕುವೆಂಪು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಅಂತರ ಕಾಲೇಜು ವಿಜ್ಞಾನ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ 22 ತಂಡಗಳು ಭಾಗವಹಿಸಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾಗರದ ವಿಜ್ಞಾನ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿಗಳಾದ ರಶ್ಮಿತ್ ಡಿ.ಎನ್. ನಿಶ್ಚಿತ್.ಎ. ಶ್ರೇಯಸ್, ಹರ್ಷಿತ್, ದರ್ಶನ್ ಕೆ.ಎಂ, ಇವರು ಭಾಗವಹಿಸಿ ಪ್ರಥಮ ಬಹುಮಾನ ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಣ್ಣ ಹನುಮಂತಪ್ಪ .ಜಿ , ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಮಮತಾ ಹೆಗಡೆ , ಕವಿತಾ ರಾವ್ ಮತ್ತು ಅಧ್ಯಾಪಕವರ್ಗ, ಭೋಧಕೇತರ ಸಿಬ್ಬಂದಿಗಳು, ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t