Home Blog ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅತ್ಯಗತ್ಯ:ಪಾಲಕ್ಷ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅತ್ಯಗತ್ಯ:ಪಾಲಕ್ಷ

81
0

ಆನಂದಪುರ:ಪ್ರತಿಯೊಂದು ಶಾಲೆಯಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಗವರ್ನರ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ದ ರೊ.ಕೆ ಪಾಲಕ್ಷ ತಿಳಿಸಿದರು.

ಇವರು ಆನಂದಪುರ ಸಮೀಪದ ಗೌತಮಪುರದ ವಿದ್ಯಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿಯ ಜಾಗತಿಕ ಅನುದಾನದಡಿಯಲ್ಲಿ ಅನುಷ್ಠಾನಗೊಂಡಿರುವ ಶಾಲಾ ಕಟ್ಟಡದ ನವೀಕರಣ, ಶೌಚಾಲಯಗಳ ನಿರ್ಮಾಣ, ವಿಠೋಪಕರಣಗಳು ಮತ್ತು ಕಂಪ್ಯೂಟರ್ ತರಗತಿಗಳ ಉದ್ಘಾಟನೆ ಮಾಡಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಶಾಲೆಗಳಲ್ಲಿ ಕಂಪ್ಯೂಟರ್ ತರಬೇತಿ ನಡೆಸುವುದು ಬಹಳ ಅತ್ಯವಶ್ಯಕವಾಗಿದೆ ಇದರಿಂದ ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಕಂಪ್ಯೂಟರ್ ಜ್ಞಾನವನ್ನು ಸಂಪಾದಿಸಲು ಸಾಧ್ಯವಾಗುತ್ತಿದೆ ಎಂದರು.

ಖಾಸಗಿ ಶಾಲೆಯಲ್ಲಿ ಪ್ರಮುಖವಾಗಿ ಉತ್ತಮ ಕಟ್ಟಡ ಹೊಂದಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಉತ್ತಮ ಶಿಕ್ಷಣ ಕಲ್ಪಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗೌತಮೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ, ನಾಗರತ್ನ ಎಸ್. ಕೆ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರಮುಖವಾಗಿ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲು ಹೆಚ್ಚಿನ ಒತ್ತನ್ನು ಖಾಸಗಿ ಶಾಲೆಗಳು ನೀಡಬೇಕಾಗಿದೆ ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ಉತ್ತಮ ರೀತಿಯಲ್ಲಿ ಬೆಳಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ಮರಿಯಪ್ಪ,ಸಿ. ಆರ್. ಪಿ. ಬರಮ ಗೌಡ ನಾಯಕ್, ಡಾ. ನಾರಾಯಣ್, ರವಿ ಪಾಟೀಲ್, ಆನಂದ್ , ವಿಶ್ವಾಸ್ ,ಸೆಂಥಿಲ್ ವೇಲನ್ ಹಾಗೂ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t