ಮನೆ ಶಿವಮೊಗ್ಗ ಶಾಲೆಯ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!!

ಶಾಲೆಯ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!!

39
0

✒️…ಅಮಿತ್ ಆರ್ ಆನಂದಪುರ

ಶಿವಮೊಗ್ಗ/ಹೊಸನಗರ: ಹೊಸನಗರ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಹೊಸನಗರ ತಾಲ್ಲೂಕಿನ ಬೈಸೆ ಗ್ರಾಮದ ರಾಕೇಶ್ (28) ಎಂದು ಗುರುತಿಸಲಾಗಿದ್ದು, ತಂದೆ ಗಣೇಶ್ ಜೋಗಿ ಎಂದು ತಿಳಿದುಬಂದಿದೆ.

ಸಾವಿನ ಅಸಲಿ ಸತ್ಯವೇನು..?

ಮೃತ ರಾಕೇಶ್ ಗಾರೆ ಕೆಲಸ ಮಾಡಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಇವರ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ಠಾಣೆಯಲ್ಲಿ ದಾಖಲಾಗಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ಸರಿಸುಮಾರು 4 ಲಕ್ಷ ರೂಪಾಯಿ ಸಾಲವನ್ನು ರಾಕೇಶ್ ಮಾಡಿಕೊಂಡಿದ್ದನೆಂಬುದು ತಿಳಿದುಬಂದಿದ್ದು, ಈ ಕಾರಣದಿಂದಾಗಿ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದನೆಂದು ಮೃತನ ತಂದೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 6ರ ಶುಕ್ರವಾರ ಗಾರೆ ಕೆಲಸಕ್ಕೆ ಹೋಗಿದ್ದ ರಾಕೇಶ್ ಮನೆಗೆ ಮರಳಿರಲಿಲ್ಲ. ಫೆಬ್ರವರಿ 7ರ ಶನಿವಾರದಂದು ಬೈಸೆ ಗ್ರಾಮದ ಸರ್ಕಾರಿ ಶಾಲೆಯ ಮುಂದೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ